Friday, November 22
Share News

ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯ ಪ್ರಮಾಣ ತಗ್ಗಲಿದೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು ಜುಲೈ 23ರವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಕರ್ನಾಟಕ ರಾಜ್ಯಾದ್ಯಂತ ಮುಂದಿನ 5 ದಿನಗಳವರೆಗೆ ಮಳೆಯ ತೀವ್ರತೆ ಕಡಿಮೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ. ಆದರೆ, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಜು. 25ರ ವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 23ರ ವರೆಗೆ ಹಳದಿ ಅಲರ್ಟ್‌ ಘೋಷಿಸಲಾಗಿದೆ.

ಹಳದಿ ಅಲರ್ಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲಾ – ಕಾಲೇಜಿಗೆ ರಜೆ ಇರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.


Share News

Comments are closed.

Exit mobile version