Browsing: ಧಾರ್ಮಿಕ

ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

ಪುತ್ತೂರು: ಧಾರ್ಮಿಕ ಕಾರ್ಯಕ್ರಮಗಳಿಗೆ ಪೂರಕವೆನಿಸಿರುವ ಪೂಜಾ ಸಾಮಗ್ರಿಗಳಿಗೆ ಇನ್ನು ಎಲ್ಲೆಂದರಲ್ಲಿ ಅಲೆದಾಡಬೇಕಾಗಿಲ್ಲ. ಪುತ್ತೂರು ಎಪಿಎಂಸಿ ರಸ್ತೆಯ ಕ್ರಿಸ್ತೋಫರ್ ಬಿಲ್ಡಿಂಗಿನಲ್ಲಿ ಸುಭದ್ರ…

ಕೊರಗಜ್ಜ ದೈವದ ಆದಿಸ್ಥಳವಾದ ಕುತ್ತಾರು ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ (katrina Kaif) ಸೇರಿದಂತೆ ಸುನೀಲ್ ಶೆಟ್ಟಿ (sunil Shetty) ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ, ಹಾಗೂ ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ (KL Rahul) ಭೇಟಿ ನೀಡಿದ್ದಾರೆ.

ಕರಾವಳಿ ಜಿಲ್ಲೆಯ ದೈವಗಳ ಕಾರಣಿಕ ಹೇಳುತ್ತಾ ಹೋದರೆ ಒಂದಲ್ಲ ಎರಡಲ್ಲ ಸಾವಿರಾರು ನಿದರ್ಶನ ನೀಡಬಹುದು. ಕಾಂತಾರ ಸಿನಿಮಾವೂ ಇದೇ ನೆಲೆಯಲ್ಲಿ ಹುಟ್ಟಿಕೊಂಡ ಚಿತ್ರ. ಇಲ್ಲಿ ಪೊಲೀಸ್ ಇಲಾಖೆ ತನಿಖೆ ಮಾಡುವ ಮೊದಲೇ ದೈವಗಳು ಅಪರಾಧಿಯನ್ನು ತಂದು ಭಕ್ತರ ಮುಂದೆ ಇಟ್ಟು ಕಾರಣೀಕವನ್ನು ತೋರಿದೆ ಎಂದರೆ ನೀವು ನಂಬಲೇಬೇಕು. ಇದಕ್ಕೆ ಸಾಕ್ಷಿ ಎನ್ನುವಂತೆ ಉಡುಪಿಯಲ್ಲಿ ಒಂದು ಘಟನೆ ನಡೆದಿದೆ. ದೇವರ ಕಾಣಿಕೆ ಹಣ ಕದ್ದು ಪರಾರಿಯಾಗಿದ್ದ ಕಳ್ಳ 24 ಗಂಟೆ ಒಳಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣಕನ್ನಡ ಜಿಲ್ಲೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ ಇದರ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸುಧಿರ್ಘ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ಮೇ 31 ರಂದು ನಿವೃತ್ತಿ ಹೊಂದಿರುವ ಡಾ| ಎಲ್.ಎಚ್. ಮಂಜುನಾಥ್ ರವರಿಗೆ ದಕ್ಷಣಕನ್ನಡ ಜಿಲ್ಲಾ ಜನಜಾಗೃತಿ ವೇದಿಕೆ ಮತ್ತು ತಾಲೂಕು ಜನಜಾಗೃತಿ ವೇದಿಕೆ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆಯ ಸರ್ವ ಸದಸ್ಯರ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಹೇಳಿದರು.

ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ವತಿಯಿಂದ ನಡೆಯಲಿರುವ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರವನ್ನು ಮಂಡಳಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.