tamanvi
ವಿದೇಶ

ಧರ್ಮಸ್ಥಳ: ವೀರೇಂದ್ರ ಹೆಗ್ಗಡೆಯವರ ಕುರಿತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ

ಇನ್ಮುಂದೆ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುವುದು ಮತ್ತು ಅವಹೇಳನಕಾರಿ ಮಾಹಿತಿಯನ್ನು ಪ್ರಕಟಿಸುವುದು,

ಈ ಸುದ್ದಿಯನ್ನು ಶೇರ್ ಮಾಡಿ

ಇನ್ಮುಂದೆ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಸ್ಥಳದ ಸಂಸ್ಥೆಗಳು ಹಾಗೂ ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಅಪಪ್ರಚಾರ ಮಾಡುವುದು ಮತ್ತು ಅವಹೇಳನಕಾರಿ ಮಾಹಿತಿಯನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಅಥವಾ ಹರಡುವುದು ನಿಷೇಧಿಸಿ ಜಾನ್ ಡೋ ಆದೇಶ ಹೊರಡಿಸಲಾಗಿದೆ.

ಏನಿದು ಜಾನ್ ಡೋ ಆದೇಶ..?

ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧ ಜಾರಿಯಾಗುವ ಕಾನೂನು ಕ್ರಮ ಇದಾಗಿದ್ದು, ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆ್ಯಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಯೂ-ಟ್ಯೂಬ್ ಹಾಗೂ ದೃಶ್ಯ ಮಾಧ್ಯಮ ಸೇರಿದಂತೆ ಮತ್ತಿತ್ತರ ಮಾಧ್ಯಮಗಳ ಮೂಲಕ ನೀಡಲಾಗುತ್ತಿರುವ ಅವಹೇಳನಕಾರಿ ಹೇಳಿಕೆ ಮತ್ತು ಅಪಪ್ರಚಾರಕ್ಕೆ ಕಡಿವಾಣ ಹಾಕಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡಿ ತೇಜೋವಧೆ ಮಾಡುವುದನ್ನು ತಡೆಯಲು ಈ ಆದೇಶ ಬಹಳ ಪ್ರಮುಖವಾಗಿದೆ. ನ್ಯಾಯಾಲಯ ಹೊರಡಿಸಿರುವ ಈ ಆದೇಶವನ್ನು ಉಲ್ಲಂಘಿಸಿದ್ದೇ ಆದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮುರಿದುಬಿತ್ತು ಅಮೆರಿಕ – ಇರಾನ್ ಶಾಂತಿ ಒಪ್ಪಂದ’? ಇರಾನ್ ಮುಂದಿರುವುದು ಸೇಡಿನ ಬಯಕೆಯೇ ಹೊರತು, ಸ್ನೇಹದ ಪ್ರದರ್ಶನವಲ್ಲ!!

ಕೊಲ್ಲಿ ರಾಷ್ಟ್ರಗಳ ಯುದ್ಧ ಇಸ್ಲಾಮಾಬಾದ್ ಶಾಂತಿ ಒಪ್ಪಂದದಿಂದ ತಹಬದಿಗೆ ಬಂತು ಎಂದು ವಿಶ್ವವೇ…