ವಿದೇಶ

ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ವಿಶ್ವಸಂಸ್ಥೆ | ಭಾರತ – ಪಾಕ್’ಗೆ ಹತ್ತಿರವಾಗಿದ್ದೇನೆಂದ ಟ್ರಂಪ್!

ಜಮ್ಮುಕಾಶ್ಮೀರದ ಪಹಲ್ಗಾಮ್ನ ಉಗ್ರರ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತೀವ್ರವಾಗಿ ಖಂಡಿಸಿದ್ದು, ಭಯೋತ್ಪಾದನೆ ನಿರ್ಮೂಲನೆಗೆ ಎಲ್ಲಾ ದೇಶಗಳು ಒಂದಾಗಿ ಹೋರಾಡುವಂತೆ ಕರೆ ನೀಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಜಮ್ಮುಕಾಶ್ಮೀರದ ಪಹಲ್ಗಾಮ್ನ ಉಗ್ರರ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತೀವ್ರವಾಗಿ ಖಂಡಿಸಿದ್ದು, ಭಯೋತ್ಪಾದನೆ ನಿರ್ಮೂಲನೆಗೆ ಎಲ್ಲಾ ದೇಶಗಳು ಒಂದಾಗಿ ಹೋರಾಡುವಂತೆ ಕರೆ ನೀಡಿದೆ.

akshaya college

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿ, ಕಾಶ್ಮೀರದಲ್ಲಿ ಪ್ರವಾಸಿಗರನ್ನು ಹತ್ಯೆ ಮಾಡಿದ್ದು ಅಮಾನವೀಯ ಕೃತ್ಯ. ಮುಗ್ಧ ಜನರನ್ನು ಕೊಂದಿರುವ ಉಗ್ರರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಭಯೋತ್ಪಾದನೆ, ಉಗ್ರರ ಕೃತ್ಯಗಳಿಗೆ ಯಾರೂ ಬೆಂಬಲ ನೀಡಬಾರದು. ಭಯೋತ್ಪಾದನೆ ಇಂದು ಜಾಗತಿಕ ಶಾಂತಿ ವ್ಯವಸ್ಥೆಗೆ ಅಡ್ಡಿಯಾಗಿದೆ. ಹೀಗಾಗಿ ಭಯೋತ್ಪಾದನೆ ನಿರ್ಮೂಲನೆಗೆ ಎಲ್ಲಾ ದೇಶಗಳು ಒಂದಾಗಬೇಕು ಎಂದು ಕರೆ ನೀಡಿದೆ.

ಉಗ್ರರ ದಾಳಿ ಖಂಡಿಸಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್:

ಇನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಕೂಡ ಕಾಶ್ಮೀರದ ಪಹಲ್ಗಾಮ್​​​ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ಉಗ್ರರ ದಾಳಿ ಒಂದು ಕೆಟ್ಟ ಘಟನೆ. ಇದನ್ನು ಅಮೆರಿಕ ತೀವ್ರವಾಗಿ ಖಂಡಿಸುತ್ತೆ ಎಂದು ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವಾಗಲೂ ಉದ್ವಿಗ್ನತೆ ಇದ್ದು, ಅದು ಈ ಘಟನೆಯಿಂದ ಮತ್ತಷ್ಟು ಹೆಚ್ಚಾಗಿದೆ. ನಿಮಗೆ ತಿಳಿದಿರುವಂತೆ ನಾನು ಭಾರತಕ್ಕೂ ತುಂಬಾ ಹತ್ತಿರವಾಗಿದ್ದೇನೆ ಮತ್ತು ಪಾಕಿಸ್ತಾನಕ್ಕೂ ತುಂಬಾ ಹತ್ತಿರವಾಗಿದ್ದೇನೆ ಎಂದು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬೌದ್ಧ ಭಿಕ್ಷುಗಳ ಸನ್ಯಾಸ ಶೀಲ ಭಂಗ!! 80 ಸಾವಿರ ಫೋಟೋ, ವೀಡಿಯೋದೊಂದಿಗೆ ಸಿಕ್ಕಿ ಬಿದ್ದ ವಿಲವಾನ್ ಎಮ್ನಾವತ್!!

ಥಾಯ್ಲೆಂಡ್‌ನಲ್ಲಿ ಬೌದ್ಧ ಭಿಕ್ಷುಗಳನ್ನು ಲೈಂಗಿಕ ಸಂಬಂಧಕ್ಕೆ ಆಕರ್ಷಿಸಿ, ನಂತರ ದೋಷಾರೋಪಣೆ…

“ನನ್ನ ಕುಟುಂಬ ಸರ್ವನಾಶ, ನಾನೂ ಸತ್ತಿದ್ರೆ ಚೆನ್ನಾಗಿತ್ತು, ಯಾರನ್ನು ಬಿಡಲ್ಲ”: ಉಗ್ರ ಮಸೂದ್ ಅಜ್ಹರ್ ಕಣ್ಣೀರು!

ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್‌ನ ಪ್ರಮುಖ ನೆಲೆ ಮರ್ಕಜ್ ಸುಭಾನ್ ಅಲ್ಲಾ…