tamanvi
ವಿದೇಶ

ಪಾಕಿಸ್ತಾನದಲ್ಲಿ ಮತ್ತೋರ್ವ ಜೈಶ್ ಉಗ್ರ ನಿಗೂಢ ಸಾವು!

D_shiva_bhat
ಪಾಕಿಸ್ತಾನದಲ್ಲಿ ಭಾರತದ ಮತ್ತೊಬ್ಬ ಶತ್ರುವಿನ ಆಟ ಮುಗಿದಿದೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ನಿಗೂಢವಾಗಿ ಸಾವನ್ನಪ್ಪಿದ್ದಾನೆ.

ಈ ಸುದ್ದಿಯನ್ನು ಶೇರ್ ಮಾಡಿ

ಪಾಕಿಸ್ತಾನದಲ್ಲಿ ಭಾರತದ ಮತ್ತೊಬ್ಬ ಶತ್ರುವಿನ ಆಟ ಮುಗಿದಿದೆ. ಜೈಶ್-ಎ-ಮೊಹಮ್ಮದ್‌ನ ಹಿರಿಯ ಕಮಾಂಡರ್ ಮೌಲಾನಾ ಅಬ್ದುಲ್ ಅಜೀಜ್ ನಿಗೂಢವಾಗಿ ಸಾವನ್ನಪ್ಪಿದ್ದಾನೆ.

ಈ ನಿಗೂಢ ಸಾವು ಗುಪ್ತಚರ ವಲಯಗಳಿಂದ ಭಯೋತ್ಪಾದಕ ಜಾಲದವರೆಗೆ ಸಂಚಲನ ಮೂಡಿಸಿದೆ.

ಕಳೆದ ತಿಂಗಳು ಜೈಶ್ ರ್ಯಾಲಿಯಲ್ಲಿ ಭಾರತದ ವಿರುದ್ಧ ವಿಷ ಕಾರಿದ್ದ, ಭಾರತವೂ ಯುಎಸ್ಎಸ್ಆರ್ ನಂತೆಯೇ ಸ್ಥಿತಿಯನ್ನು ಅನುಭವಿಸುತ್ತದೆ ಎಂದು ವೇದಿಕೆಯಿಂದಲೇ ಬಹಿರಂಗವಾಗಿ ಬೆದರಿಕೆ ಹಾಕಿದ್ದ. ಜೈಶ್ ಮತ್ತು ಪಾಕಿಸ್ತಾನ ಸರ್ಕಾರ ಈ ಸಾವಿನ ಬಗ್ಗೆ ಮೌನ ವಹಿಸಿವೆ. ಜೈಶ್ ಜೊತೆ ಸಂಬಂಧ ಹೊಂದಿರುವ ಸಾಮಾಜಿಕ ಮಾಧ್ಯಮ ಖಾತೆಗಳು ಅವನ ಸಾವು ಮತ್ತು ಅಂತ್ಯಕ್ರಿಯೆಯನ್ನು ದೃಢಪಡಿಸಿವೆ.

ಅಬ್ದುಲ್ ಅಜೀಜ್ ಜೈಶ್-ಎ-ಮೊಹಮ್ಮದ್‌ನ ಪಂಜಾಬ್ ಪ್ರಾಂತ್ಯದಲ್ಲಿ ಮತ್ತು ವಿಶೇಷವಾಗಿ ಬಹಾವಲ್ಪುರ್, ರಾವಲ್ಪಿಂಡಿಯಂತಹ ಪ್ರದೇಶಗಳಲ್ಲಿ ಭಾರತದ ವಿರುದ್ಧ ಯುವಕರನ್ನು ಮೂಲಭೂತವಾದಕ್ಕೆ ಪ್ರಚೋದಿಸುತ್ತಿದ್ದ.

ಕಳೆದ ತಿಂಗಳು ನಡೆದ ರ್ಯಾಲಿಯಲ್ಲಿ, ಭಾರತದಿಂದ ಕಾಶ್ಮೀರವನ್ನು ಕಸಿದುಕೊಳ್ಳುವುದಾಗಿ ಬೆದರಿಕೆ ಹಾಕಿದ್ದ. ಆಗಾಗ ಭಾರತದ ವಿರುದ್ಧ ವಿಷ ಕಾರುತ್ತಿದ್ದ. ಕೆಲವು ಸಮಯದಿಂದ ಪಾಕಿಸ್ತಾನದಲ್ಲಿ ಭಯೋತ್ಪಾದಕರನ್ನು ಕೊಲ್ಲುವ ಪ್ರಕ್ರಿಯೆ ನಡೆಯುತ್ತಿದೆ. ಇಲ್ಲಿಯವರೆಗೆ, ಭಾರತದ ವಿರುದ್ಧದ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ 15 ಭಯೋತ್ಪಾದಕರನ್ನು ಪಾಕಿಸ್ತಾನದಲ್ಲಿ ಕೊಲ್ಲಲಾಗಿದೆ.

ಅಬ್ದುಲ್ ಅಜೀಜ್ ಜೈಶ್‌ನ ಪ್ರಮುಖ ಉಗ್ರನಾಗಿದ್ದ. ಅಬ್ದುಲ್ ಅಜೀಜ್ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಭಯೋತ್ಪಾದಕರನ್ನು ನೇಮಿಸಿಕೊಳ್ಳುತ್ತಿದ್ದ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮುರಿದುಬಿತ್ತು ಅಮೆರಿಕ – ಇರಾನ್ ಶಾಂತಿ ಒಪ್ಪಂದ’? ಇರಾನ್ ಮುಂದಿರುವುದು ಸೇಡಿನ ಬಯಕೆಯೇ ಹೊರತು, ಸ್ನೇಹದ ಪ್ರದರ್ಶನವಲ್ಲ!!

ಕೊಲ್ಲಿ ರಾಷ್ಟ್ರಗಳ ಯುದ್ಧ ಇಸ್ಲಾಮಾಬಾದ್ ಶಾಂತಿ ಒಪ್ಪಂದದಿಂದ ತಹಬದಿಗೆ ಬಂತು ಎಂದು ವಿಶ್ವವೇ…

ಬೌದ್ಧ ಭಿಕ್ಷುಗಳ ಸನ್ಯಾಸ ಶೀಲ ಭಂಗ!! 80 ಸಾವಿರ ಫೋಟೋ, ವೀಡಿಯೋದೊಂದಿಗೆ ಸಿಕ್ಕಿ ಬಿದ್ದ ವಿಲವಾನ್ ಎಮ್ನಾವತ್!!

ಥಾಯ್ಲೆಂಡ್‌ನಲ್ಲಿ ಬೌದ್ಧ ಭಿಕ್ಷುಗಳನ್ನು ಲೈಂಗಿಕ ಸಂಬಂಧಕ್ಕೆ ಆಕರ್ಷಿಸಿ, ನಂತರ ದೋಷಾರೋಪಣೆ…