ವಿದೇಶ

ಪ್ರೆಸ್’ಕ್ಲಬ್’ಗೆ ನುಗ್ಗಿ ಪತ್ರಕರ್ತರ ಮೇಲೆ ಪೊಲೀಸರಿಂದ ಲಾಠಿಚಾರ್ಜ್!

GL

ಈ ಸುದ್ದಿಯನ್ನು ಶೇರ್ ಮಾಡಿ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ಅಸಮಾಧಾನದ ಅಲೆ ಈಗ ಇಸ್ಲಾಮಾಬಾದ್ ತಲುಪಿದೆ. ಕಾಶ್ಮೀರ ಕ್ರಿಯಾ ಸಮಿತಿ ಆಯೋಜಿಸಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ರಾಷ್ಟ್ರೀಯ ಪ್ರೆಸ್ ಕ್ಲಬ್ ಮೇಲೆ ಪೊಲೀಸ್ ದಾಳಿ ನಡೆಸಿ, ವಕೀಲರು ಹಾಗೂ ಪತ್ರಕರ್ತರ ಮೇಲೆ ಲಾಠಿಚಾರ್ಜ್ ಮಾಡಿರುವ ಘಟನೆ ಇಸ್ಲಾಮಾಬಾದ್​ನಲ್ಲಿ ನಡೆದಿದೆ.

chennai-shopping
maithri

ತಾರತಮ್ಯ ಖಂಡಿಸಿ ಪಾಕಿಸ್ತಾನ ಸರ್ಕಾರದ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಜನ ದಂಗೆ ಎದ್ದಿದ್ದು, ಅನಿರ್ದಿಷ್ಟಾವಧಿ ಪ್ರತಿಭಟನೆ 4ನೇ ದಿನ ಪೂರೈಸಿದೆ. ಇದನ್ನು ಹತ್ತಿಕ್ಕಲು ಪಾಕಿಸ್ತಾನ ಸರ್ಕಾರ ಲಾಠಿಚಾರ್ಜ್​, ಗೋಲಿಬಾರ್​​ನಂತಹ ಧಮನಕಾರಿ ನೀತಿ ಪ್ರದರ್ಶಿಸುತ್ತಿದೆ.ಇಸ್ಲಾಮಾಬಾದ್ ಪೊಲೀಸರು ಬಲವಂತವಾಗಿ ಪ್ರೆಸ್​​ಕ್ಲಬ್​ನ ಆವರಣಕ್ಕೆ ಪ್ರವೇಶಿಸಿ ಪತ್ರಕರ್ತರು ಮತ್ತು ಪ್ರತಿಭಟನಾಕಾರರ ಮೇಲೆ ದಾಳಿ ನಡೆಸಿದ್ದಾರೆ.

ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ದೌರ್ಜನ್ಯಗಳು ಮತ್ತು ಇಂಟರ್ನೆಟ್ ಕಡಿತದ ವಿರುದ್ಧ ಕಾಶ್ಮೀರ ಕ್ರಿಯಾ ಸಮಿತಿ ಆಯೋಜಿಸಿದ್ದ ಪ್ರತಿಭಟನೆ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ವಕೀಲ ಸಮುದಾಯದ ಸದಸ್ಯರು ಎನ್‌ಪಿಸಿ ಹೊರಗೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದರು. ಪೊಲೀಸರು ಅವರ ಮೇಲೆ ದಾಳಿ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

“ನನ್ನ ಕುಟುಂಬ ಸರ್ವನಾಶ, ನಾನೂ ಸತ್ತಿದ್ರೆ ಚೆನ್ನಾಗಿತ್ತು, ಯಾರನ್ನು ಬಿಡಲ್ಲ”: ಉಗ್ರ ಮಸೂದ್ ಅಜ್ಹರ್ ಕಣ್ಣೀರು!

ಪಾಕಿಸ್ತಾನದ ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್‌ನ ಪ್ರಮುಖ ನೆಲೆ ಮರ್ಕಜ್ ಸುಭಾನ್ ಅಲ್ಲಾ…

ಭೀಕರ ಪರಿಸರ ದುರಂತಕ್ಕೆ ನಾಂದಿ ಹಾಡಲಿದೆ ಇರಾನ್ – ಇಸ್ರೇಲ್ ಯುದ್ಧ! ಭಾರತಕ್ಕೂ ಭೀಕರ ಆರೋಗ್ಯ ಸಮಸ್ಯೆ ತಟ್ಟುವ ಭೀತಿ?

ಇರಾನ್ ಹಾಗೂ ಅಮೆರಿಕ, ಇಸ್ರೇಲ್ ನಡುವಿನ ಯುದ್ಧ ಇದೀಗ ಭೀಕರ ಪರಿಸರ ದುರಂತಕ್ಕೆ ಹೇತುವಾಗಿದೆ…