ದೀರ್ಘಕಾಲದಿಂದ ಹೃದಯ ಹಾಗೂ ಶ್ವಾಸಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಲೀದಾ ಜಿಯಾ (80) ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ.
ಬಾಂಗ್ಲಾದೇಶದ ರಾಜಕೀಯದಲ್ಲಿ, ವಿಶೇಷವಾಗಿ ಬಿಎನ್‌ಪಿ ಪಕ್ಷದಲ್ಲಿ ಅವರ ಪಾತ್ರ ಮಹತ್ವಪೂರ್ಣವಾಗಿತ್ತು.
1991ರಲ್ಲಿ ಖಲೀದಾ ಜಿಯಾ ಬಾಂಗ್ಲಾದೇಶದಲ್ಲಿ ಮೊದಲ ಮಹಿಳಾ ಪ್ರಧಾನಿಯಾಗಿ ಆಯ್ಕೆಯಾಗಿದ್ದರು.
ಬಾಂಗ್ಲಾದೇಶ ನ್ಯಾಷನಲ್ ಪಕ್ಷದ ಅಧ್ಯಕ್ಷೆಯಾಗಿದ್ದ ಖಲೀದಾ ಅವರು ಮುಂಬರುವ ಫೆಬ್ರವರಿಯಲ್ಲಿ ನಡೆಯಲಿದ್ದ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿ ಮತ್ತೆ ಅಧಿಕಾರಕ್ಕೇರುವ ಹುಮ್ಮಸ್ಸಿನಲ್ಲಿದ್ದರು. ಅಲ್ಲದೆ ಇದಕ್ಕಾಗಿ ತಯಾರಿಯನ್ನೂ ನಡೆಸುತಿದ್ದರು ಎಂದು ಹೇಳಲಾಗಿತ್ತು. ಆದರೆ ಇದೀಗ ಅವರ ನಿಧನವು ಬಾಂಗ್ಲಾದೇಶದ ರಾಜಕೀಯದಲ್ಲಿ ದೊಡ್ಡ ಆಘಾತವುಂಟು ಮಾಡಿದೆ.



























