ವಿದೇಶ

ಟೆಹ್ರಾನ್ ವಾಯುದಾಳಿ: ಅಲಿ ಖಮೇನಿ ನಿಧನ; ಇರಾನ್‌ನಲ್ಲಿ 40 ದಿನ ಶೋಕಾಚರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ನಡುವೆ ರಾಜಧಾನಿ ಟೆಹ್ರಾನ್‌ನಲ್ಲಿ ನಡೆದ ಭಾರೀ ವಾಯುದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ  ಅಲಿ ಖಮೇನಿ ಮತ್ತು ಅವರ ಕುಟುಂಬದ ಸದಸ್ಯರು ಸಾವಿಗೀಡಾದಿದ್ದಾರೆ ಎಂಬ ಮಾಹಿತಿ ಇರಾನ್ ಸರ್ಕಾರದ ಮಾಧ್ಯಮಗಳಿಂದ ಹೊರಬಿದ್ದಿದೆ.

ಇರಾನ್‌ನ ಅಧಿಕೃತ ಸುದ್ದಿ ಸಂಸ್ಥೆಗಳಾದ ಪಾರ್ಸ್‌ ನ್ಯೂಸ್‌ ಎಜೇನ್ಸಿ ಹಾಗೂ  ಇಸ್ಲಾಮಿಕ್‌ ರಿಪಬ್ಲಿಕ್‌ ಆಫ್‌ ಇರಾನ್‌ ಬ್ರಾಡ್‌ ಕಾಸ್ಟಿಂಗ್‌ ವರದಿಗಳ ಪ್ರಕಾರ, ಶನಿವಾರ ನಡೆದ ದಾಳಿಯಲ್ಲಿ ಖಮೇನಿ ಅವರ ಪುತ್ರಿ, ಅಳಿಯ, ಸೊಸೆ ಮತ್ತು ಮೊಮ್ಮಗು ಮೃತಪಟ್ಟಿದ್ದಾರೆ. ಆರಂಭಿಕ ಹಂತದಲ್ಲಿ ಖಮೇನಿ ಅವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ಗೊಂದಲಕಾರಿ ವರದಿಗಳು ಹರಿದಾಡಿದ್ದರೂ, ಭಾನುವಾರ ಬೆಳಿಗ್ಗೆ ಅವರನ್ನು ಕೂಡ “ಹುತಾತ್ಮ”ರಾಗಿದ್ದಾರೆ ಎಂದು ಸರ್ಕಾರಿ ಮಾಧ್ಯಮಗಳು ಘೋಷಿಸಿವೆ. ದಾಳಿಯ ನಂತರ ದೇಶಾದ್ಯಂತ 40 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗಿದೆ. ಟೆಹ್ರಾನ್‌ನಲ್ಲಿರುವ ಭದ್ರತಾ ವಲಯದ ಒಳಗೆ ಖಮೇನಿ ಅವರ ನಿವಾಸ ಮತ್ತು ಕಚೇರಿಗಳನ್ನು ಗುರಿಯಾಗಿಸಿ ನಡೆದ ಬಾಂಬ್ ದಾಳಿಯಿಂದ ಪ್ರದೇಶದಲ್ಲಿ ಭಾರೀ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.

ಈ ಬೆಳವಣಿಗೆಯೊಂದಿಗೆ ಇರಾನ್‌ನಲ್ಲಿ ರಾಜಕೀಯ ಅನಿಶ್ಚಿತತೆ ಉಂಟಾಗಿದ್ದು, ಇಸ್ಲಾಮಿಕ್‌ ರೆವೆಲ್ಯೂಸನರಿ ಗಾರ್ಡ್‌ ಕಾರ್ಪ್ಸ್ (IRGC) ಸೇರಿದಂತೆ ಉನ್ನತ ಅಧಿಕಾರಿಗಳು ಮುಂದಿನ ನಾಯಕತ್ವ ಕುರಿತಂತೆ ತುರ್ತು ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಸುದ್ದಿ ಹೊರಬಂದ ಬಳಿಕ ದೇಶದ ಕೆಲವು ಭಾಗಗಳಲ್ಲಿ ವಿಭಿನ್ನ ಪ್ರತಿಕ್ರಿಯೆಗಳು ಕಂಡುಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ದೃಶ್ಯಗಳು ಹರಿದಾಡುತ್ತಿವೆ. ಖಮೇನಿ ಅವರಿಗೆ ಒಟ್ಟು ಆರು ಮಕ್ಕಳು ಇದ್ದು, ಈ ದಾಳಿಯಲ್ಲಿ ಮೃತಪಟ್ಟ ಕುಟುಂಬ ಸದಸ್ಯರ ವಿವರಗಳ ಕುರಿತು ಹೆಚ್ಚಿನ ಅಧಿಕೃತ ಮಾಹಿತಿ ನಿರೀಕ್ಷೆಯಲ್ಲಿದೆ.ಈ ಘಟನೆ ಮಧ್ಯಪ್ರಾಚ್ಯದ ಭದ್ರತಾ ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

 

 

 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವೆನೆಜುವೆಲಾಕ್ಕೆ ಸ್ವಯಂಘೋಷಿತ ಅಧ್ಯಕ್ಷ! ಅಷ್ಟಕ್ಕೂ ಅಮೆರಿಕ ಅಧ್ಯಕ್ಷರಿಗೆ ಬೇಕಾಗಿರುವುದೇನು ಎಂದು ಪ್ರಶ್ನಿಸಿದ ನೆಟ್ಟಿಗರು!!

ವಾಷಿಂಗ್ಟನ್: ವೆನೆಜುವೆಲಾ ಅಧ್ಯಕ್ಷ ಮಡುರೊ ಅವರನ್ನು ಅಮೆರಿಕ ಅಪಹರಿಸಿ ಬಂಧಿಸಿದ್ದೇ ವಿಶ್ವಕ್ಕೆ…