tamanvi
ವಿದೇಶ

ಶ್ರೀಲಂಕಾ ಗಡಿಯಲ್ಲಿ ಮುಳುಗಿದ ಇರಾನ್ ಹಡಗು: ದಾಳಿ ನಡೆಸಿದ ಸಬ್’ಮೆರಿನ್??

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಯುದ್ಧದ ತೀವ್ರತೆ ಮುಂದುವರಿಯುತ್ತಿದ್ದಂತೆ, ಶ್ರೀಲಂಕಾ ಗಡಿಯೊಳಗೆ ಪ್ರವೇಶಿಸಿದ ಇರಾನಿನ ಹಡಗನ್ನು ಹೊಡೆದುರುಳಿಸಲಾಗಿದೆ. ಹಡಗಿನಲ್ಲಿದ್ದವರನ್ನು ರಕ್ಷಿಸಲಾಗುತ್ತಿದ್ದು, 101 ಮಂದಿ ಕಣ್ಮರೆಯಾಗಿದ್ದಾರೆ ಎಂದು ವರದಿಯಾಗಿದೆ.

ಬುಧವಾರ ಶ್ರೀಲಂಕಾ ಸಮುದ್ರ ಗಡಿಯೊಳಗೆ ಇರಾನಿಗೆ ಸೇರಿದ ಹಡಗೊಂದು ಪ್ರವೇಶಿಸಿದ್ದು, ಸಬ್’ಮೆರಿನ್ ಮೂಲಕ ದಾಳಿ ನಡೆಸಲಾಗಿದೆ ಎಂದು ರಾಯಿಟರ್ಸ್ ತಿಳಿಸಿದೆ. ದಾಳಿಯ ಹಿನ್ನೆಲೆಯ ಬಗ್ಗೆ ಇನ್ನೂ ಮಾಹಿತಿ ತಿಳಿದುಬಂದಿಲ್ಲ.

ಈ ಬಗ್ಗೆ ಶ್ರೀಲಂಕಾ ವಿದೇಶಾಂಗ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ಇರಾನ್ ಹಡಗಿನಲ್ಲಿದ್ದ 30 ಮಂದಿಯನ್ನು ರಕ್ಷಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ನಾಪತ್ತೆಯಾದವರ ಶೋಧ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ರಕ್ಷಣೆ ಮಾಡಿದವರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಏಳು ಮಂದಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಶ್ರೀಲಂಕಾ ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿ ಡಾ. ಅನಿಲ್ ಜಾಸಿಂಘೆ ಮಾಹಿತಿ ನೀಡಿದ್ದಾರೆ.

180 ಜನರಿದ್ದ ಐಆರ್​ಐಎಸ್ ದೇನಾ (IRIS Dena) ಹಡಗು ಸಂಕಷ್ಟದಲ್ಲಿದೆ ಎಂದು ಶ್ರೀಲಂಕಾ ನೌಕಾಪಡೆಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ವಾಯುಪಡೆ ಹಾಗೂ ಹಡಗುಗಳ ಮೂಲಕ ಕಾರ್ಯಾಚರಣೆ ನಡೆಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮುರಿದುಬಿತ್ತು ಅಮೆರಿಕ – ಇರಾನ್ ಶಾಂತಿ ಒಪ್ಪಂದ’? ಇರಾನ್ ಮುಂದಿರುವುದು ಸೇಡಿನ ಬಯಕೆಯೇ ಹೊರತು, ಸ್ನೇಹದ ಪ್ರದರ್ಶನವಲ್ಲ!!

ಕೊಲ್ಲಿ ರಾಷ್ಟ್ರಗಳ ಯುದ್ಧ ಇಸ್ಲಾಮಾಬಾದ್ ಶಾಂತಿ ಒಪ್ಪಂದದಿಂದ ತಹಬದಿಗೆ ಬಂತು ಎಂದು ವಿಶ್ವವೇ…