ವಿದೇಶ

ಕೆನಡಾದಲ್ಲಿ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಭಾರತೀಯ ಯುವಕನ ಮೃತದೇಹ ಪತ್ತೆ!

ಈ ಸುದ್ದಿಯನ್ನು ಶೇರ್ ಮಾಡಿ

ಕಾರಿನೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಭಾರತೀಯ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ಕೆನಡಾದ ಬ್ರಿಟಿಷ್ ಕೊಲಂಬಿಯಾದ ಲ್ಯಾಂಗ್ಲಿ ಪ್ರದೇಶದಲ್ಲಿ ಸಂಭವಿಸಿದೆ.

ತುಷಾರ್ ಶರ್ಮಾ(25) ಮೃತ ಯುವಕ ಎಂದು ಗುರುತಿಸಲಾಗಿದೆ.

ತುಷಾರ್ ಕೆನಡಾದ ಸರ್ರೆ ಎಂಬಲ್ಲಿ ವಾಸಿಸುತ್ತಿದ್ದರು. ಅ. 29ರ ರಾತ್ರಿ ಸುಮಾರು 10:30ರ ವೇಳೆಗೆ ಲ್ಯಾಂಗ್ಲಿಯ ರಾವ್ಲಿನ್ಸನ್ ಕ್ರೆಸೆಂಟ್ ಬಳಿ ಕಾರೊಂದು ಹೊತ್ತಿ ಉರಿಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ಈ ವೇಳೆ ಕಾರಿನೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ತುಷಾರ್ ಅವರ ಮೃತದೇಹ ದೊರೆತಿತ್ತು.

ಇದೊಂದು ಉದ್ದೇಶಪೂರ್ವಕ ಕೊಲೆ ಇರಬಹುದು ಎಂದು ಶಂಕಿಸಿರುವ ಕೆನಡಾ ಪೊಲೀಸರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಕೆನಡಾದ ಇಂಟಿಗ್ರೇಟೆಡ್ ಹೋಮಿಸೈಡ್ ಇನ್ವೆಸ್ಟಿಗೇಷನ್ ಟೀಮ್ ತನಿಖೆ ನಡೆಸುತ್ತಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡಗಳು ಭೇಟಿ ನೀಡಿ ಸಾಕ್ಷ್ಯಗಳನ್ನು ಕಲೆಹಾಕುತ್ತಿವೆ.

ತುಷಾರ್ ಅವರಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇರಲಿಲ್ಲ. ಕೆನಡಾದಲ್ಲಿ ಅವರಿಗೆ ಹೆಚ್ಚಿನ ಸ್ನೇಹಿತರ ಬಳಗವೂ ಇರಲಿಲ್ಲ. ಹೀಗಿರುವಾಗ ಅವರನ್ನು ಯಾರು ಮತ್ತು ಯಾವ ಕಾರಣಕ್ಕೆ ಕೊಲೆ ಮಾಡಿದರು ಎಂಬುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದಲೇ ಕಾರಿಗೆ ಬೆಂಕಿ ಹಚ್ಚಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts