ನವದೆಹಲಿ: ದಹೆಲಿ ಅಬಕಾರಿ ನೀತಿ ಹಗರಣ ಸಂಬಂಧಿಸದಿಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ.
ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮುಂದಿನ ಜೂನ್ 01 ರವರೆಗೆ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಿ ಶುಕ್ರವಾರ ಆದೇಶಿಸಿದೆ.
ಈ ಮೂಲಕ ಅರವಿಂದ್ ಕೇಜ್ರಿವಾಲರ 50 ದಿನಗಳ ಸೆರೆವಾಸ ಅಂತ್ಯ ಕಂಡಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ಕಾರ್ಯಗಳಲ್ಲಿ ಅವರ ಭಾಗಿಯಾಗಲು ಸುಪ್ರೀಂ ಕೋರ್ಟ್ ಅವಕಾಶ ಕೊಟ್ಟಿದೆ.