ದೇಶ

131 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ರೈತ ನಾಯಕ ಜಗಜಿತ್ ಸಿಂಗ್ ಡಲ್ಲೆವಾಲ್!!

ಹಿರಿಯ ರೈತ ಮುಖಂಡ ಜಗಜಿತ್ ಸಿಂಗ್ ಡಲ್ಲೆವಾಲ್ ಅವರು ಕಳೆದ 131 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಭಾನುವಾರ ಅಂತ್ಯಗೊಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಹಿರಿಯ ರೈತ ಮುಖಂಡ ಜಗಜಿತ್ ಸಿಂಗ್ ಡಲ್ಲೆವಾಲ್ ಅವರು ಕಳೆದ 131 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಭಾನುವಾರ ಅಂತ್ಯಗೊಳಿಸಿದ್ದಾರೆ.

akshaya college

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮತ್ತು ಪ್ರತಿಭಟನಾನಿರತ ರೈತರು ಎತ್ತಿರುವ ಇತರ ಸಮಸ್ಯೆಗಳಿಗೆ ಕಾನೂನು ಖಾತರಿ ನೀಡುವಂತೆ ಒತ್ತಾಯಿಸಿ ಅವರು ಕಳೆದ ವರ್ಷ ನವೆಂಬ‌ರ್ 26 ರಂದು ಉಪವಾಸ ಆರಂಭಿಸಿದ್ದರು.

ಅದರಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ರವನೀತ್ ಸಿಂಗ್ ಬಿಟ್ಟು ಅವರ ಆಮರಣಾಂತ ಉಪವಾಸವನ್ನು ಕೊನೆಗೊಳಿಸುವಂತೆ ಡಲ್ಲೆವಾಲ್ ಅವರ ಬಳಿ ಮನವಿ ಮಾಡಿದ್ದರು ಇದಾದ ಒಂದು ದಿನದಲ್ಲೇ ಉಪವಾಸ ಸತ್ಯಾಗ್ರಹ ಕೊನೆಗೊಳಿಸುವ ಘೋಷಣೆ ಹೊರಬಿದ್ದಿದೆ.

ಫತೇಘ‌ರ್ ಸಾಹಿಬ್ ಜಿಲ್ಲೆಯ ಸಿರ್ಹಿಂದ್‌ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ನಡೆದ ರೈತರ ಸಭೆಯಲ್ಲಿ ಈ ನಿರ್ಧಾರವನ್ನು ಪ್ರಕಟಿಸಲಾಯಿತು. ಈ ವೇಳೆ ಮಾತನಾಡಿದ ಡಲ್ಲೆವಾಲ್ “ನೀವೆಲ್ಲರೂ ಆಮರಣಾಂತ ಉಪವಾಸವನ್ನು ಅಂತ್ಯಗೊಳಿಸಲು ನನ್ನನ್ನು ಕೇಳಿದ್ದೀರಿ, ಆಂದೋಲನವನ್ನು ಕಾಳಜಿ ವಹಿಸಿದ್ದಕ್ಕಾಗಿ ನಾನು ನಿಮಗೆ ಋಣಿಯಾಗಿದ್ದೇನೆ ನಾನು ನಿಮ್ಮ ಭಾವನೆಗಳನ್ನು ಗೌರವಿಸುತ್ತೇನೆ, ಜೊತೆಗೆ ನಾನು ನಿಮ್ಮ ಆದೇಶವನ್ನು ಸ್ವೀಕರಿಸುತ್ತೇನೆ” ಎಂದು ಹೇಳಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts