Gl harusha
ದೇಶ

ಸಮುದ್ರದಲ್ಲಿ ಪಾಕ್ ವ್ಯಕ್ತಿಗೆ ಶಸ್ತ್ರಚಿಕಿತ್ಸೆ ನೀಡಿ ಜೀವ ಉಳಿಸಿದ ಭಾರತೀಯ ನೌಕಾಪಡೆ

ಓಮನ್ ಕರಾವಳಿಯಲ್ಲಿ ಇರಾನಿನ ಮೀನುಗಾರಿಕಾ ಹಡಗಿನಲ್ಲಿದ್ದ ಅಸ್ವಸ್ಥಗೊಂಡಿದ್ದ ಪಾಕಿಸ್ತಾನಿ ಸಿಬ್ಬಂದಿಗೆ ಭಾರತೀಯ ನೌಕಾಪಡೆ ತುರ್ತು ವೈದ್ಯಕೀಯ ನೆರವು ನೀಡಿ, ಮಾನವೀಯತೆ ಮೆರೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಓಮನ್ ಕರಾವಳಿಯಲ್ಲಿ ಇರಾನಿನ ಮೀನುಗಾರಿಕಾ ಹಡಗಿನಲ್ಲಿದ್ದ ಅಸ್ವಸ್ಥಗೊಂಡಿದ್ದ ಪಾಕಿಸ್ತಾನಿ ಸಿಬ್ಬಂದಿಗೆ ಭಾರತೀಯ ನೌಕಾಪಡೆ ತುರ್ತು ವೈದ್ಯಕೀಯ ನೆರವು ನೀಡಿ, ಮಾನವೀಯತೆ ಮೆರೆದಿದೆ.

srk ladders
Pashupathi

ಹಡಗಿನ ಸಿಬ್ಬಂದಿಯೊಬ್ಬರು ಎಂಜಿನ್ ನ ಕೆಲಸ ಮಾಡುವಾಗ ಅವರ ಕೈ ಬೆರಳುಗಳಿಗೆ ತೀವ್ರ ಗಾಯಗಳಾಗಿ ರಕ್ತಸ್ರಾವವಾಗಿತ್ತು. ಈ ವೇಳೆ ಇರಾನಿನ ಧೋ ಅಲ್ ಒಮೀದಿಯಿಂದ ಬಂದ ತುರ್ತು ಕರೆಗೆ ಭಾರತೀಯ ನೌಕಪಡೆ ಸ್ಪಂದಿಸಿದೆ. ಬಳಿಕ ಓಮನ್ ಕರಾವಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕಾಪಡೆಯ ರಹಸ್ಯ ಯುದ್ಧನೌಕೆ ಐಎನ್ ಎಸ್ ತ್ರಿಕಾಂಡ್ (INS Trikand), ತಕ್ಷಣವೇ ಘಟನಾ ಸ್ಥಳಕ್ಕೆ ತಲುಪಿದೆ. ಅಲ್ಲದೇ ಗಾಯಗೊಂಡ ಸಿಬ್ಬಂದಿಗೆ ವೈದ್ಯಕೀಯ ನೆರವು ನೀಡಿದೆ.

ತ್ರಿಕಂಡ್ ನ ವೈದ್ಯಕೀಯ ಸಿಬ್ಬಂದಿ ಅರಿವಳಿಕೆ ನೀಡಿ, ಬೆರಳುಗಳಿಗೆ ಹೊಲಿಗೆ ಹಾಕಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ಶಸ್ತ್ರಚಿಕಿತ್ಸೆ ಮಾಡಿದರು. ಚಿಕಿತ್ಸೆಯಿಂದಾಗಿ ಕೈ ಬೆರಳುಗಳ ಶಾಶ್ವತವಾಗಿ ಕಳೆದುಕೊಳ್ಳುವುದನ್ನು ತಡೆಯಲಾಯಿತು. ಅಲ್ಲದೇ ಇರಾನ್ ತಲುಪುವವರೆಗೆ ಗಾಯಗೊಂಡ ಸಿಬ್ಬಂದಿಗೆ ಅಗತ್ಯ ಔಷಧವನ್ನು ನೀಡಲಾಯಿತು ಎಂದು ನೌಕಾಪಡೆ ತಿಳಿಸಿದೆ.

ಮೀನುಗಾರಿಕಾ ಬೋಟ್ ನಲ್ಲಿ 11 ಪಾಕಿಸ್ತಾನಿಗಳು (ಒಂಬತ್ತು ಬಲೂಚ್ ಮತ್ತು ಇಬ್ಬರು ಸಿಂಧಿ) ಮತ್ತು ಐದು ಇರಾನಿನ ಸಿಬ್ಬಂದಿ ಇದ್ದರು. ಗಾಯಗೊಂಡ ಪಾಕಿಸ್ತಾನಿ (ಬಲೂಚ್) ಪ್ರಜೆಯ ಕೈಗೆ ತೀವ್ರ ಗಾಯಗಳಾಗಿತ್ತು. ಇದರ ಪರಿಣಾಮವಾಗಿ ಭಾರೀ ರಕ್ತಸ್ರಾವವಾಗಿತ್ತು ಎಂದು ನೌಕಾಪಡೆ ತಿಳಿಸಿದೆ.

ತಮ್ಮ ಸಿಬ್ಬಂದಿಯ ಜೀವವನ್ನು ಉಳಿಸುವಲ್ಲಿ ನೆರವು ನೀಡಿದ್ದಕ್ಕೆ ಭಾರತೀಯ ನೌಕಾಪಡೆಗೆ ಹಡಗಿನ ಸಿಬ್ಬಂದಿ ಕೃತಜ್ಞತೆ ಸಲ್ಲಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts