Gl harusha
ದೇಶ

ರಾಜಸ್ಥಾನದಲ್ಲೂ ಹವಾ ಸೃಷ್ಟಿಸಲಿದೆ ಕೆಎಂಎಫ್!

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ರಾಜಸ್ಥಾನದಲ್ಲಿ ಹವಾ ಸೃಷ್ಟಿಸಲು ಕರ್ನಾಟಕದ ಬ್ರಾಂಡ್ ನಂದಿನಿ ತಯಾರಿ ನಡೆಸುತ್ತಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ದೇಶದಲ್ಲೇ ಅತಿಹೆಚ್ಚು ಹಾಲು ಉತ್ಪಾದಿಸುವ ರಾಜ್ಯಗಳ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ರಾಜಸ್ಥಾನದಲ್ಲಿ ಹವಾ ಸೃಷ್ಟಿಸಲು ಕರ್ನಾಟಕದ ಬ್ರಾಂಡ್ ನಂದಿನಿ ತಯಾರಿ ನಡೆಸುತ್ತಿದೆ.

srk ladders
Pashupathi
Muliya

ದೆಹಲಿಯಲ್ಲಿ ಮಾರಾಟ ಆರಂಭಿಸಿದ ಕೆಲವೇ ತಿಂಗಳುಗಳಲ್ಲಿ ಇದೀಗ ರಾಜಸ್ಥಾನ ಹಾಗೂ ಮಧ್ಯ ಪ್ರದೇಶಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಕೆಎಂಫ್(KMF) ಚಿಂತನೆ ನಡೆಸಿದೆ.

ದಕ್ಷಿಣ ಭಾರತದ ವ್ಯಾಪ್ತಿ ಮೀರಿ ಮಾರುಕಟ್ಟೆ ವಿಸ್ತರಿಸಿಕೊಳ್ಳುವ ಯೋಜನೆಯ ಭಾಗವಾಗಿ ಕೆಎಂಎಫ್ ಈ ಯೋಜನೆಗೆ ಮುಂದಾಗಿದೆ.

ರಾಜಸ್ಥಾನದಲ್ಲಿ ಹಾಲು ಸಂಗ್ರಹ ಪ್ರಾರಂಭಿಸಲು ಮತ್ತು ಕೊ-ಪ್ಯಾಕೇಜಿಂಗ್ ಸೆಂಟರ್ ಗಳನ್ನು ಸ್ಥಾಪಿಸಲು ಕೆಎಂಎಫ್ ಯೋಜಿಸಿದೆ.

ಪೂರೈಕೆ ಸರಪಳಿಯನ್ನು ಬಲಪಡಿಸಲು ಮತ್ತು ಉತ್ತರ ಭಾರತದ ಮಾರುಕಟ್ಟೆಯಲ್ಲಿ ಪ್ರಭಾವ ಹೆಚ್ಚಿಸಲು ರಾಜಸ್ಥಾನ ಮಾತ್ರವಲ್ಲದೆ, ಮಧ್ಯಪ್ರದೇಶವನ್ನು ಪ್ರಮುಖ ಭಾಗವಾಗಿ ಪರಿಗಣಿಸಲಾಗುತ್ತಿದೆ ಎಂದು ಕೆಎಂಎಫ್ ಹೇಳಿಕೊಂಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts