ದೇಶ

ಕಾಶ್ಮೀರದಲ್ಲಿ ಉಗ್ರರ ದಾಳಿ; ಸೌದಿ ಪ್ರವಾಸ ತೊರೆದು ರಾತ್ರಿಯೇ ಪ್ರಧಾನಿ ಭಾರತಕ್ಕೆ ವಾಪಸ್‌!

GL
ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ, ಕಳೆದ ಕೆಲವು ವರ್ಷಗಳಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾದಲ್ಲಿದ್ದು, ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ವಾಪಸಾಗಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ಜಮ್ಮು ಮತ್ತು ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ, ಕಳೆದ ಕೆಲವು ವರ್ಷಗಳಲ್ಲಿ ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೌದಿ ಅರೇಬಿಯಾದಲ್ಲಿದ್ದು, ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ವಾಪಸಾಗಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

chennai-shopping
maithri

ಸೌದಿ ಅರೇಬಿಯಾದಲ್ಲಿ ಆಯೋಜಿಸಲಾಗಿದ್ದ ಉನ್ನತ ಮಟ್ಟದ ಭೋಜನಕೂಟವನ್ನು ತಪ್ಪಿಸಿರುವ ಅವರು, ಇಂದು ರಾತ್ರಿಯೇ ರಿಯಾದ್‌ನಿಂದ ಭಾರತಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿದೆ. ಮೂಲತಃ ಪ್ರಧಾನಿ ಮೋದಿ ಅವರು ತಮ್ಮ ಎರಡು ದಿನಗಳ ಭೇಟಿಯನ್ನು ಪೂರ್ಣಗೊಳಿಸಿ, ನಾಳೆ ರಾತ್ರಿ ಅಂದರೆ ಏಪ್ರಿಲ್ 23ರಂದು ಭಾರತಕ್ಕೆ ಮರಳಬೇಕಿತ್ತು. ಆದರೆ, ಕಾಶ್ಮೀರದಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಅಟ್ಟಹಾಸ ಮೆರೆದಿರುವ ಹಿನ್ನೆಲೆ ಇದನ್ನು ಗಂಭೀರವಾಗಿ ಪರಿಗಣಿಸಿ ಅವರು ತಮ್ಮ ಎಲ್ಲ ಯೋಜನೆಯನ್ನು ಬದಲಾಯಿ ಹಿಂತಿರುಗಲಿದ್ದಾರೆ. ಪ್ರಧಾನಿ ಅವರು ಬುಧವಾರ ಬೆಳಿಗ್ಗೆ ದೆಹಲಿಗೆ ಆಗಮಿಸಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಪಹಲ್ಲಾಮ್ ಭಯೋತ್ಪಾದಕ ದಾಳಿ:

ದಕ್ಷಿಣ ಕಾಶ್ಮೀರದ ಪ್ರಮುಖ ಪ್ರವಾಸಿ ತಾಣವಾದ ಪಹಲ್ಲಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಸುಮಾರು 26ಕ್ಕೂ ಹೆಚ್ಚು ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಯ ನಂತರ, ಭದ್ರತಾ ಸಂಸ್ಥೆಗಳು ಅಲರ್ಟ್ ಆಗಿವೆ. ಈ ಮಧ್ಯೆ, ದಾಳಿಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

ಭಯೋತ್ಪಾದಕರನ್ನು ಸುಮ್ಮನೆ ಬಿಡುವುದಿಲ್ಲ – ಪ್ರಧಾನಿ

ಸಂತ್ರಸ್ತ ಜನರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ. ಈ ಘೋರ ಕೃತ್ಯದ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು. ಯಾವುದೇ ಕಾರಣಕ್ಕೂ ಅವರನ್ನು ಸುಮ್ಮನೆ ಬಿಡಲಾಗುವುದಿಲ್ಲ. ಅವರ ದುಷ್ಟರ ಕಾರ್ಯ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದೆ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ. 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts