ದೇಶ

ಶಿಕ್ಷಕಿಯ ಜಡೆ ಹಿಡಿದು ಚಪ್ಪಲಿಯಲ್ಲಿ ಬಾರಿಸಿದ ವಿದ್ಯಾರ್ಥಿನಿ!!

ಇಲ್ಲೊಬ್ಬಳು ವಿದ್ಯಾರ್ಥಿನಿ ತನ್ನ ಚಪ್ಪಲಿಯಲ್ಲೇ ತನ್ನ ಗುರುವಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಈ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. 

ಈ ಸುದ್ದಿಯನ್ನು ಶೇರ್ ಮಾಡಿ

ಇಲ್ಲೊಬ್ಬಳು ವಿದ್ಯಾರ್ಥಿನಿ ತನ್ನ ಚಪ್ಪಲಿಯಲ್ಲೇ ತನ್ನ ಗುರುವಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಈ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. 

maithri

ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದೆ. ವಿದ್ಯಾರ್ಥಿನಿ ತರಗತಿಯಲ್ಲಿ ಫೋನಿನಲ್ಲಿ ಮಾತನಾಡುತ್ತಿದ್ದನ್ನು ಕಂಡ ಶಿಕ್ಷಕಿ ಆಕೆಯಿಂದ ಫೋನ್​​ ಕಸಿದುಕೊಂಡಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿನಿ ನೇರವಾಗಿ ತನ್ನ ಶಿಕ್ಷಕಿಯ ಮೇಲೆಯೇ ಕೈ ಮಾಡಿದ್ದಾಳೆ.

ಕಾಲೇಜಿನ ಕ್ಯಾಂಪಸ್​​​ನಲ್ಲೇ ನೂರಾರು ವಿದ್ಯಾರ್ಥಿಗಳ ಮುಂದೆ ಶಿಕ್ಷಕಿಗೆ ಚಪ್ಪಲಿಯಲ್ಲಿ ಹೊಡೆದಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಇದಲ್ಲದೇ ಶಿಕ್ಷಕಿಗೆ ಅವಾಚ್ಯ ಶಬ್ದಗಳಿಂದ ಶಬ್ದಗಳಿಂದ ಬೈಯುತ್ತಿರುವುದನ್ನು ಕಾಣಬಹುದು. @DrSrinubabu ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ.

ಅಲ್ಲೇ ಇದ್ದ ವಿದ್ಯಾರ್ಥಿಯೊಬ್ಬರು ಈ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಅಷ್ಟೇ ಅಲ್ಲ, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಘು ಕಾಲೇಜು ಆಡಳಿತ ಮಂಡಳಿ ವಿಚಾರಣೆ ನಡೆಸಿದ್ದು,ವಿದ್ಯಾರ್ಥಿನಿ ಕೋಪಗೊಂಡು ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾಳೆಂದು ತಿಳಿದುಬಂದಿದೆ. ಶಿಕ್ಷಕಿಯ ಮೇಲೆ ಕೈ ಮಾಡಿದ ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬಕ್ರೀದ್ ದಿನ ವಿಶಾಲ್ ಆಗಿ ಮತಾಂತರಗೊಂಡ ಬಿಲಾಲ್! ಮುಸ್ಲಿಂ ಧರ್ಮ ತ್ಯಜಿಸಿ ಹಿಂದೂ ಧರ್ಮ ಸ್ವೀಕರಿಸಿ ರಾಮಚರಿತ ಮಾನಸ ಪಠಣ!

ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ಬಕ್ರೀದ್ ಆಚರಣೆಯಂದೇ ಬಿಲಾಲ್ ಎಂಬ ಮುಸ್ಲಿಂ ಯುವಕ ಹಿಂದೂ…