ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೆಹಾಲ್ಗಾಮ್ ನಲ್ಲಿ ಉಗ್ರರು ನಡೆಸಿದ ನರಮೇದದ ಹಿನ್ನಲೆ ಕೇಂದ್ರ ಸರ್ಕಾರ ರಾಜತಾಂತ್ರಿಕವಾಗಿ ಪಾಕಿಸ್ತಾನದ ಮೇಲೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗಿದೆ.ಪಾಕಿಸ್ತಾನದ ವಿರುದ್ಧ ಭಾರೀ ಆಕ್ರೋಶ ಕೇಳಿ ಬರ್ತಿದೆ. ಭಾರತ ಇದಕ್ಕೆ ಪ್ರತೀಕಾರ ತೀರಿಸಲೇಬೇಕು ಎಂಬ ಕೂಗೂ ಕೇಳಿ ಬರ್ತಿದೆ. ಇದರ ಬೆನ್ನಲ್ಲೇ ಪಾಕ್‌ಗೆ ಕೇಂದ್ರ ಸರ್ಕಾರ ಇನ್ನೊಂದು ಶಾಕ್ ನೀಡಿದೆ.
ಪಾಕಿಸ್ತಾನದ ಹಡಗುಗಳನ್ನು ಯಾವುದೇ ಭಾರತೀಯ ಬಂದರಿಗೆ ಭೇಟಿ ನೀಡಲು ಅನುಮತಿಸಬಾರದು ಮತ್ತು ಭಾರತೀಯ ಧ್ವಜ ಹಡಗುಗಳು ಪಾಕಿಸ್ತಾನದ ಯಾವುದೇ ಬಂದರುಗಳಿಗೆ ಭೇಟಿ ನೀಡಬಾರದು ಎಂದು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯ ಶನಿವಾರ ಆದೇಶ ಹೊರಡಿಸಿದೆ