ಇಸ್ಲಾಮಾಬಾದ್: ಭಾರತವು ಪಾಕಿಸ್ತಾನ 9 ಪ್ರದೇಶಗಳ ಮೇಲೆ ವಾಯು ದಾಳಿ ನಡೆಸಿದ್ದು, 100ಕ್ಕೂ ಅಧಿಕ ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಆಪರೇಷನ್ ಸಿಂಧೂರ್ (Operation Sindoor) ಹೆಸರಿನ ಈ ದಾಳಿ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರ.
ಮೇ 7 ರಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ, ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ 9 ಭಯೋತ್ಪಾದಕ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಭಾರತವು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದ ನಂತರ ಪಾಕಿಸ್ತಾನದ ಮಸೀದಿಗಳಿಂದ ಘೋಷಣೆ ಕೇಳಿಬಂದಿವೆ. ಪಾಕಿಸ್ತಾನದಾದ್ಯಂತ ಭಯದ ವಾತಾವರಣವಿದೆ. ಜನರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳನ್ನು ತಲುಪುವಂತೆ ಮಸೀದಿಗಳ ಮೂಲಕ ಮನವಿ ಮಾಡಲಾಗುತ್ತಿದೆ.
ಯಾವ್ಯಾವ ಸ್ಥಳಗಳ ಮೇಲೆ ಭಾರತ ದಾಳಿ:
ಭಾರತೀಯ ಸೇನೆಯು ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಬಹವಾಲ್ಪುರ್, ಕೋಟ್ಲಿ, ಮುರಿಡ್ಕೆ, ಬಾಗ್ ಮತ್ತು ಮುಜಫರಾಬಾದ್‌ಗಳ ಮೇಲೆ ದಾಳಿ ನಡೆಸಿದೆ. ಭಾರತದ ಮೇಲೆ ಭಯೋತ್ಪಾದಕ ದಾಳಿಗಳನ್ನು ಯೋಜಿಸಿ ಕಾರ್ಯಗತಗೊಳಿಸಲಾಗುತ್ತಿದ್ದ ಅಡಗುತಾಣಗಳು ಇವು. ಭಾರತ ಮಹಿಳೆಯರು ಮತ್ತು ಮಕ್ಕಳ ಮೇಲೆ ಗುಂಡು ಹಾರಿಸುತ್ತಿದೆ ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಹೇಳಿದ್ದಾರೆ.