ದೇಶ

ಪಾಕ್ ದಾಳಿಯನ್ನು ಹಿಮ್ಮೆಟಿಸಿದ ಭಾರತ | ಪಾಕ್, ಚೀನಾದಿಂದ ಪಡೆದಿದ್ದ ಏರ್ ಡಿಫೆನ್ಸ್ ಸಿಸ್ಟಮ್ ಉಡೀಸ್’ಗೈದ ಭಾರತ

GL

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಲಾಗಿದ್ದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ.

chennai-shopping
maithri

ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ. ಈ ಬಗ್ಗೆ ಭಾರತೀಯ ಸೇನೆ ಅಧಿಕೃತ ಮಾಹಿತಿ ಪ್ರಕಟಿಸಿದ್ದು ದಾಳಿಯನ್ನು ಖಚಿತಪಡಿಸಿದೆ.

ಪಾಕಿಸ್ತಾನ ಚೀನಾದಿಂದ HQ-9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ಪಡೆದಿತ್ತು ಈಗ ಈ ವ್ಯವಸ್ಥೆಯನ್ನು ಭಾರತ ಸಂಪೂರ್ಣ ನಾಶ ಮಾಡಿದೆ. ದಾಳಿಯನ್ನು ಪಾಕಿಸ್ತಾನ ಸಹ ಖಚಿತಪಡಿಸಿದ್ದು, ದಾಳಿಯಲ್ಲಿ ನಾಲ್ವರು ಪಾಕಿಸ್ತಾನದ ಯೋಧರು ಗಾಯಗೊಂಡಿದ್ದಾರೆ ಎಂದು ತಿಳಿಸಿದೆ.

ನೆನ್ನೆ ರಾತ್ರಿ ಪಾಕಿಸ್ತಾನ ಭಾರತದ 15 ನಗರಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲು ಯತ್ನಿಸಿತ್ತು ಈ ದಾಳಿಯನ್ನು ಭಾರತ 9 ಏರ್ ಡಿಫೆನ್ಸ್ ಸಿಸ್ಟಮ್ ನ್ನು ನಾಶ ಮಾಡುವ ಮೂಲಕ ತಡೆಗಟ್ಟಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

“ಅಲ್ಲಾನೇ ಸರ್ವೋಚ್ಚ, ವಂದೇ ಮಾತರಂ ಹಾಡಲ್ಲ”: ಸಂಚಲನ ಸೃಷ್ಟಿಸಿದ ಪಾಲಿಕೆಯ ಕಾಂಗ್ರೆಸ್ ಸದಸ್ಯರ ವರ್ತನೆ

ಮಧ್ಯಪ್ರದೇಶದ ಇಂದೋರ್ ನಗರ ಪಾಲಿಕೆಯಲ್ಲಿ ಬಜೆಟ್‌ಗೆ ಸಂಬಂಧಿಸಿದ ಚರ್ಚೆಯ ವೇಳೆ ರಾಷ್ಟ್ರೀಯ ಗೀತೆ…

ಮಧ್ಯಪ್ರಾಚ್ಯ ಉದ್ವಿಗ್ನತೆ : ಸಂಕಷ್ಟದಲ್ಲಿನ ಕನ್ನಡಿಗರ ನೆರವಿಗೆ ಉಡುಪಿ ಜಿಲ್ಲಾಡಳಿತದಿಂದ ತುರ್ತು ಸಹಾಯವಾಣಿ

ಮಂಗಳೂರು: ಮಧ್ಯಪ್ರಾಚ್ಯದ ಕೆಲವು ರಾಷ್ಟ್ರಗಳಲ್ಲಿ ಉಂಟಾಗಿರುವ ಅಸ್ಥಿರತೆ ಹಾಗೂ ಅಂತರಾಷ್ಟ್ರೀಯ…