ದೇಶ

7 ನಗರಗಳಿಗೆ ವಿಮಾನ ಹಾರಾಟ ರದ್ದು!

GL
ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ವಾಯುಪ್ರದೇಶ ನಿರ್ಬಂಧಗಳು ಮತ್ತು ಹೆಚ್ಚಿನ ಭದ್ರತಾ ಕ್ರಮಗಳನ್ನು ಉಲ್ಲೇಖಿಸಿ, ಇಂಡಿಗೋ ಮತ್ತು ಏರ್ ಇಂಡಿಯಾ ಸಂಸ್ಥೆಗಳು ಇಂದು ಮಂಗಳವಾರ ಉತ್ತರ ಮತ್ತು ಪಶ್ಚಿಮ ಭಾರತದ ಅನೇಕ ನಗರಗಳಿಗೆ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ವಾಯುಪ್ರದೇಶ ನಿರ್ಬಂಧಗಳು ಮತ್ತು ಹೆಚ್ಚಿನ ಭದ್ರತಾ ಕ್ರಮಗಳನ್ನು ಉಲ್ಲೇಖಿಸಿ, ಇಂಡಿಗೋ ಮತ್ತು ಏರ್ ಇಂಡಿಯಾ ಸಂಸ್ಥೆಗಳು ಇಂದು ಮಂಗಳವಾರ ಉತ್ತರ ಮತ್ತು ಪಶ್ಚಿಮ ಭಾರತದ ಅನೇಕ ನಗರಗಳಿಗೆ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿವೆ.

chennai-shopping
maithri

ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿದೆ.

ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿರುವ ವಿಮಾನಯಾನ ಸಂಸ್ಥೆ, ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಮ್ಮು, ಲೇಹ್, ಜೋಧ್‌ಪುರ, ಅಮೃತಸರ, ಭುಜ್, ಜಾಮ್‌ನಗರ, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಇಂದು ರದ್ದುಗೊಳಿಸಲಾಗಿದೆ. ಪರಿಸ್ಥಿತಿಯನ್ನು ಕೂಲಂಕಷವಾಗಿ ಗಮನಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಮೊನ್ನೆ ಶನಿವಾರ ರಾತ್ರಿ 11:59 ರವರೆಗೆ ಶ್ರೀನಗರ, ಜಮ್ಮು, ಅಮೃತಸರ, ಲೇಹ್, ಚಂಡೀಗಢ ಮತ್ತು ರಾಜ್‌ಕೋಟ್‌ಗೆ ಹೋಗುವ ಮತ್ತು ಅಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ರದ್ದುಗೊಳಿಸುವುದಾಗಿ ಇಂಡಿಗೋ ಘೋಷಿಸಿದೆ.

ನಿನ್ನೆ ಸೋಮವಾರ ಸಂಜೆ, ಅಮೃತಸರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನವು ಅಮೃತಸರದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದ ನಂತರ ದೆಹಲಿಗೆ ಮರಳಿತು. ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಮಿಲಿಟರಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟ 32 ವಿಮಾನ ನಿಲ್ದಾಣಗಳಲ್ಲಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಸೋಮವಾರ ಕಾರ್ಯಾಚರಣೆಯನ್ನು ಪುನರಾರಂಭಿಸಿತ್ತು.

ಮೇ 9 ರಂದು ಪ್ರಾರಂಭವಾದ ನಾಗರಿಕ ವಿಮಾನ ಸೇವೆಗಳ ಸ್ಥಗಿತಗೊಳಿಸುವಿಕೆಯು ಶ್ರೀನಗರ ಮತ್ತು ಅಮೃತಸರ ಸೇರಿದಂತೆ ಉತ್ತರ ಮತ್ತು ಪಶ್ಚಿಮ ಭಾರತದ ಹಲವಾರು ಪ್ರಮುಖ ವಿಮಾನ ನಿಲ್ದಾಣಗಳ ಮೇಲೆ ಪರಿಣಾಮ ಬೀರಿತು. ಗಡಿಯಲ್ಲಿ ಹೆಚ್ಚಿದ ಉದ್ವಿಗ್ನತೆಯ ನಂತರ ತಾತ್ಕಾಲಿಕ ಮುಚ್ಚುವಿಕೆಯನ್ನು ಆರಂಭಿಸಿ ಮೇ 15ರವರೆಗೆ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

“ಅಲ್ಲಾನೇ ಸರ್ವೋಚ್ಚ, ವಂದೇ ಮಾತರಂ ಹಾಡಲ್ಲ”: ಸಂಚಲನ ಸೃಷ್ಟಿಸಿದ ಪಾಲಿಕೆಯ ಕಾಂಗ್ರೆಸ್ ಸದಸ್ಯರ ವರ್ತನೆ

ಮಧ್ಯಪ್ರದೇಶದ ಇಂದೋರ್ ನಗರ ಪಾಲಿಕೆಯಲ್ಲಿ ಬಜೆಟ್‌ಗೆ ಸಂಬಂಧಿಸಿದ ಚರ್ಚೆಯ ವೇಳೆ ರಾಷ್ಟ್ರೀಯ ಗೀತೆ…

ಮಧ್ಯಪ್ರಾಚ್ಯ ಉದ್ವಿಗ್ನತೆ : ಸಂಕಷ್ಟದಲ್ಲಿನ ಕನ್ನಡಿಗರ ನೆರವಿಗೆ ಉಡುಪಿ ಜಿಲ್ಲಾಡಳಿತದಿಂದ ತುರ್ತು ಸಹಾಯವಾಣಿ

ಮಂಗಳೂರು: ಮಧ್ಯಪ್ರಾಚ್ಯದ ಕೆಲವು ರಾಷ್ಟ್ರಗಳಲ್ಲಿ ಉಂಟಾಗಿರುವ ಅಸ್ಥಿರತೆ ಹಾಗೂ ಅಂತರಾಷ್ಟ್ರೀಯ…