Gl
ದೇಶ

ಇ-ಕಾಮರ್ಸ್‌ ತಾಣಗಳಲ್ಲಿ ಪಾಕ್‌ ಸರಕು ಮಾರಿದರೆ ಹುಷಾರ್‌!!

ಇ-ಕಾಮರ್ಸ್‌ ಪ್ಲಾಟ್ಫಾರ್ಮ್ಗಳು ಪಾಕಿಸ್ತಾನದ ಸರಕುಗಳನ್ನು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ತಕ್ಷಣವೇ ಇದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಇ-ಕಾಮರ್ಸ್‌ ಪ್ಲಾಟ್ಫಾರ್ಮ್ಗಳು ಪಾಕಿಸ್ತಾನದ ಸರಕುಗಳನ್ನು ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ತಕ್ಷಣವೇ ಇದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Pashupathi

ಪಾಕಿಸ್ತಾನದ ಸರಕುಗಳ ಮಾರಾಟ ಮಾಡದಂತೆ ಎಲ್ಲಾ ವಾಣಿಜ್ಯ ಕಂಪನಿಗಳು ಮತ್ತು ಕಾರ್ಪೋರೇಷನ್‌ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ಈ ಹಿಂದೆಯೇ ನೋಟಿಸ್‌ ಜಾರಿ ಮಾಡಿದೆ. ಆದರೂ ಕೆಲ ಇ-ಕಾಮರ್ಸ್‌ ತಾಣಗಳು, ಸಂಸ್ಥೆಗಳು ಸರಕು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಕೇಂದ್ರ ಸರ್ಕಾರ ಇದನ್ನು ಸಹಿಸುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

akshaya college

ಅಮೇಜಾನ್‌, ಫ್ಲಿಪ್‌ಕಾರ್ಟ್‌, ಯು ಬೈ ಇಂಡಿಯಾ, Etsy, ದಿ ಫ್ಲ್ಯಾಗ್ ಕಂಪನಿ ಮತ್ತು ಕಾರ್ಪೊರೇಷನ್‌ಗಳಿಗೆ ಸರಕು ಮಾರಾಟ ಮಾಡದಂತೆ ನೋಟಿಸ್‌ ಜಾರಿ ಮಾಡಲಾಗಿದೆ. ಆದರೂ ಈ ಆದೇಶ ಉಲ್ಲಂಘಿಸುತ್ತಿರುವುದು ಗೊತ್ತಾಗಿದೆ. ದೇಶದ ಹಿತದೃಷ್ಟಿಯಿಂದ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಚಿವ ಜೋಶಿ ಹೇಳಿದ್ದಾರೆ.

ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಪಾಕಿಸ್ತಾನ ಸಂಬಂಧಿತ ಎಲ್ಲಾ ವಸ್ತುಗಳನ್ನು ತಕ್ಷಣವೇ ತೆಗೆದುಹಾಕಬೇಕು ಮತ್ತು ರಾಷ್ಟ್ರೀಯ ಕಾನೂನನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಭಾರತವು ಪಾಕಿಸ್ತಾನದ ವಿರುದ್ಧ ಅನೇಕ ಕಟ್ಟುನಿಟ್ಟಿನ ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿತ್ತು. ಸಿಂಧೂ ನದಿಯ ನೀರನ್ನು ತಡೆಹಿಡಿಯುವುದು, ರಫ್ತು ನಿರ್ಬಂಧ, ಆಮದು ನಿರ್ಬಂಧ ಸೇರಿದಂತೆ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇ ಕಾಮರ್ಸ್​​ ತಾಣಗಳು ವಸ್ತುಗಳನ್ನು ಮಾರಾಟ ಮಾಡದಂತೆ ಸೂಚಿಸಿರುವುದೂ ಅವುಗಳಲ್ಲೊಂದು.

ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ನಡೆಸಿದ ನಂತರವಂತೂ ಉಭಯ ದೇಶಗಳ ನಡುವಣ ಪರಿಸ್ಥಿತಿ ಯುದ್ಧದ ವರೆಗೆ ಹೋಗಿತ್ತು. ಕೊನೆಯದಾಗಿ ಎರಡೂ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ನೀಡಿವೆ. ಆದರೆ, ಭಾರತ ಮಾತ್ರ ಭಯೋತ್ಪಾದನೆ ವಿರುದ್ಧ ಹೋರಾಟ ಮುಂದುವರಿಯಲಿದೆ. ನಮ್ಮ ತಂಟೆಗೆ ಬಂದರೆ ನುಗ್ಗಿ ಹೊಡೆಯಲಿದ್ದೇವೆ ಎಂಬ ಕಠಿಣ ಸಂದೇಶವನ್ನು ಪಾಕಿಸ್ತಾನಕ್ಕೆ ರವಾನಿಸಿದೆ.

ಕದನ ವಿರಾಮ ಘೋಷಣೆಯಾದರೂ ಪಾಕಿಸ್ತಾನದ ಜತೆಗೆ ವ್ಯವಹಾರ, ಮಾತುಕತೆ ಹಾಗೂ ಇತರ ಪ್ರಕ್ರಿಯೆಗಳು ಸಾಧ್ಯವಿಲ್ಲ ಎಂದು ಭಾರತ ಸ್ಪಷ್ಟವಾಗಿ ಹೇಳಿದೆ. ಪಾಕಿಸ್ತಾನದ ವಿರುದ್ಧ ಏನೇ ಮಾತುಕತೆ ಮಾಡುವುದಿದ್ದರೂ ಅದು ಭಯೋತ್ಪಾದನೆ, ಪಿಒಕೆ ವಿಚಾರವನ್ನು ಒಳಗೊಂಡಿರುತ್ತದೆ ಎಂದು ಪ್ರಧಾನಿ ಮೋದಿ ಕೂಡ ಸ್ಪಷ್ಟಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಸದ್ಯದ ಸ್ಥಿತಿಯಲ್ಲಿ ಪಾಕಿಸ್ತಾನಕ್ಕೆ ಹಾಗೂ ಪಾಕಿಸ್ತಾನದ ವಸ್ತುಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಇ ಕಾಮರ್ಸ್ ತಾಣಗಳಿಗೆ ಸಚಿವ ಜೋಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕೊನೆಕ್ಷಣದಲ್ಲಿ ಏರ್ ಇಂಡಿಯಾ ಹಾರಾಟ ರದ್ದು: ಮಂಗಳವಾರ ಒಂದೇ ದಿನ 7 ಪ್ರಕರಣ!! ಏರ್ ಇಂಡಿಯಾ ವಿಮಾನದಲ್ಲಿ ಹೆಚ್ಚುತ್ತಿದೆಯೇ ತಾಂತ್ರಿಕ ದೋಷ?

ಕೊನೆ ಕ್ಷಣದಲ್ಲಿ ವಿಮಾನ ಹಾರಾಟ ರದ್ದು ಆಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದೆ. ಮಂಗಳವಾರ ಒಂದೇ…

 ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ| ರೂಪಾಯಿಗೆ ಬಲ ನೀಡಿದ ಕ್ರಮವನ್ನು‌ ಬಹಿರಂಗಪಡಿಸಿದ ವಿನಿಮಿಯ ದತ್ತಾಂಶ!

ಅಮೆರಿಕದ ಡಾಲರ್ ಎದುರು ಸೋಮವಾರ ಭಾರತೀಯ ರೂಪಾಯಿ ಬಲಗೊಂಡಿದ್ದು, ಜಾಗತಿಕವಾಗಿ ಅಮೆರಿಕದ ಕರೆನ್ಸಿ…

‘ಆಪರೇಷನ್ ಸಿಂಧೂರ್’ ನಂತರ ಚೀನಾಕ್ಕೆ ಅಜಿತ್ ದೋವಲ್ ಕಟು ಸಂದೇಶ! ಪಾಕ್ ಇಷ್ಟಕ್ಕೆ ಸುಮ್ಮನಾಗದಿದ್ದರೇ… ಮುಂದಿದೆ ಮಾರಿಹಬ್ಬ!

ಆಪರೇಷನ್ ಸಿಂಧೂರ್' ಮೂಲಕ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದ ನಂತರ, ಭಾರತ…