RBI: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅಕ್ಟೋಬರ್ 4 ರಿಂದ ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ ತರುತ್ತಿದೆ. ಈ ಹೊಸ ವ್ಯವಸ್ಥೆಯಡಿ, ಚೆಕ್ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಹಣ ವರ್ಗಾವಣೆಯಾಗಲಿದೆ.
ಪ್ರಸ್ತುತ, ಚೆಕ್ ನಗದೀಕರಣಕ್ಕೆ ಗರಿಷ್ಠ ಎರಡು ದಿನಗಳ ಕಾಲಾವಕಾಶ ಬೇಕಾಗುತ್ತದೆ. ಆದರೆ, ಹೊಸ ನಿಯಮದ ಪ್ರಕಾರ, ಬ್ಯಾಂಕ್‌ಗಳು ಚೆಕ್‌ಗಳನ್ನು ಸ್ವೀಕರಿಸಿದ ತಕ್ಷಣ ಅವುಗಳನ್ನು ಸ್ಕ್ಯಾನ್ ಮಾಡಿ, ನಿರಂತರವಾಗಿ ಪರಿಶೀಲನೆಗೆ ಕಳುಹಿಸುತ್ತವೆ. ಇದರಿಂದಾಗಿ ಕೆಲವೇ ತಾಸುಗಳಲ್ಲಿ ಹಣ ವರ್ಗಾವಣೆಗೆ ಅನುಮೋದನೆ ಸಿಗಲಿದೆ.
ಚೆಕ್ ಕ್ಲಿಯರೆನ್ಸ್ ಪ್ರಕ್ರಿಯೆಯನ್ನು ಬದಲಾವಣೆಯ ಕುರಿತು ತಮ್ಮ ಗ್ರಾಹಕರಿಗೆ ಸರಿಯಾದ ಮಾಹಿತಿ ನೀಡುವಂತೆ ಎಲ್ಲಾ ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚಿಸಿದೆ.