Gl
ದೇಶ

ಬ್ಲೂಬರ್ಡ್-6 ಉಪಗ್ರಹ ಕಕ್ಷೆಗೆ ಸೇರಿಸಿದ ಇಸ್ರೋ | ಉಪಗ್ರಹದಿಂದಲೇ ಮೊಬೈಲಿಗೆ ಇಂಟರ್’ನೆಟ್ ಸೇವೆ: ಅತೀ ತೂಕದ ಬ್ಲೂಬರ್ಡ್ – 6ನ ಕಾರ್ಯ!

GL

ಈ ಸುದ್ದಿಯನ್ನು ಶೇರ್ ಮಾಡಿ

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ರಾಕೆಟ್ ಮಾರ್ಕ್-3 (LVM3)-M6 ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಅಮೆರಿಕದ ಬ್ಲೂಬರ್ಡ್-6 ಉಪಗ್ರಹವನ್ನು ಯಶಸ್ವಿಯಾಗಿ ನಿಗದಿತ ಕಕ್ಷೆಗೆ ಸ್ಥಾಪಿಸಿದೆ. ಶ್ರೀಹರಿಕೋಟಾ ಉಡಾವಣಾ ಕೇಂದ್ರದ ಎರಡನೇ ಲಾಂಚ್ ಪ್ಯಾಡ್‌ನಿಂದ ಬೆಳಿಗ್ಗೆ 8.54ಕ್ಕೆ ಉಡಾವಣೆಯಾದ ಈ ಭಾರೀ ರಾಕೆಟ್, ಸುಮಾರು 6,500 ಕೆಜಿ ತೂಕದ ಉಪಗ್ರಹವನ್ನು ಹೊತ್ತು ಯಶಸ್ವಿಯಾಗಿ ನಭಕ್ಕೆ ಹಾರಿತು.

core technologies

ಸುಮಾರು 15 ನಿಮಿಷಗಳ ಹಾರಾಟದ ನಂತರ ರಾಕೆಟ್‌ನಿಂದ ಬ್ಲೂಬರ್ಡ್ ಬ್ಲಾಕ್-2 ಬೇರ್ಪಟ್ಟು ಸುಮಾರು 520 ಕಿ.ಮೀ. ಎತ್ತರದಲ್ಲಿ ಅದರ ಉದ್ದೇಶಿತ ಕಕ್ಷೆಯನ್ನು ಯಶಸ್ವಿಯಾಗಿ ತಲುಪಿತು. ಉಪಗ್ರಹ ಉಡಾವಣೆ ಯಶಸ್ವಿಯಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಇಸ್ರೋವನ್ನು ಅಭಿನಂದಿಸಿದ್ದಾರೆ. LVM3-M6 ಯಶಸ್ವಿಯಾಗಿ ಮತ್ತು ನಿಖರವಾಗಿ ಬ್ಲೂಬರ್ಡ್ ಬ್ಲಾಕ್-2 ಸಂವಹನ ಉಪಗ್ರಹವನ್ನು ಉದ್ದೇಶಿತ ಕಕ್ಷೆಗೆ ಸೇರಿಸಿದೆ ಎಂದು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಮತ್ತು ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಹೇಳಿದರು.

ಭಾರತದ ನೆಲದಿಂದ ಭಾರತದ ರಾಕೆಟ್ ಮೂಲಕ ಉಡಾವಣೆ ಮಾಡಲಾದ ಅತ್ಯಂತ ಭಾರವಾದ ಉಪಗ್ರಹ ಇದಾಗಿರುವುದು ವಿಶೇಷ. ಇಸ್ರೋದ ವಾಣಿಜ್ಯ ವಿಭಾಗವಾದ ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ ಮತ್ತು ಅಮೆರಿಕ ಮೂಲದ AST ಸ್ಪೇಸ್‌ಮೊಬೈಲ್‌ ಮಧ್ಯೆ ನಡೆದ ವಾಣಿಜ್ಯ ಒಪ್ಪಂದದ ಭಾಗವಾಗಿ ಉಪಗ್ರಹವನ್ನು ಉಡಾವಣೆ ಮಾಡಲಾಗಿತ್ತು.

ಮಸ್ಕಿನ ಸ್ಟಾರ್ ಲಿಂಕ್ ಅಥವಾ ಒನ್‌ವೆಬ್ ಸೇರಿದಂತೆ ಹಲವು ಕಂಪನಿಗಳು ಉಪಗ್ರಹ ಆಧಾರಿತ ಇಂಟರ್‌ನೆಟ್ ಸೇವೆಯನ್ನು ನೀಡುತ್ತಿವೆ. ಆದರೆ ಇಲ್ಲಿ ಫೋನಿಗೆ ನೇರವಾಗಿ ಉಪಗ್ರಹದ ಸಂಪರ್ಕ ಇಲ್ಲ. ಮನೆಯಲ್ಲಿರುವ ಆಂಟೇನಾಗೆ ಉಪಗ್ರಹದ ಮೂಲಕ ಸಿಗ್ನಲ್ ತಲುಪಿ ನಂತರ ವೈಫೈ ಮೂಲಕ ಫೋನಿಗೆ ಇಂಟರ್‌ನೆಟ್‌ ಸೌಲಭ್ಯ ಪಡೆಯಬಹುದು. ಆದರೆ ಅಮೆರಿಕದ ಎಎಸ್‌ಟಿ ಸ್ಪೇಸ್ ಮೊಬೈಲ್ ತಾನು ತಯಾರಿಸಿದ ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಉಪಗ್ರಹದಿಂದಲೇ ಇಂಟರ್‌ನೆಟ್ ಸೌಲಭ್ಯ ಪಡೆಯುವಂತೆ ಈ ಬ್ಲೂಬರ್ಡ್-6 ಉಪಗ್ರಹವನ್ನು ಅಭಿವೃದ್ಧಿಪಡಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೊಟ್ವೀಲರ್, ಪಿಟ್‌ಬುಲ್ ನಾಯಿಗಳಿಗೆ ನಿಷೇಧ!! ನಾಯಿ ದಾಳಿ ಪ್ರಕರಣಗಳ ಹಿನ್ನೆಲೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡ ಪಾಲಿಕೆ!

ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ರೊಟ್ವೀಲರ್ ಮತ್ತು ಪಿಟ್‌ಬುಲ್ ತಳಿಯ ನಾಯಿಗಳನ್ನು…