ದೇಶ

ಜನ ಗಣ ಮನಕ್ಕಿಂತ ಮೊದಲು ವಂದೇ ಮಾತರಂ ಹಾಡಬೇಕು: ಕೇಂದ್ರದ ಮಾರ್ಗಸೂಚಿ!

GL

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ಐತಿಹಾಸಿಕ ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆ ಹಿನ್ನೆಲೆ, ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

chennai-shopping
maithri

ಶಾಲೆಗಳು, ಕಾಲೇಜುಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಮೊದಲು ‘ವಂದೇ ಮಾತರಂ’ ನುಡಿಸಬೇಕು ಅಥವಾ ಹಾಡಬೇಕು ಎಂದು ಸೂಚಿಸಲಾಗಿದೆ.

ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಯ ಪ್ರಕಾರ, ‘ವಂದೇ ಮಾತರಂ’ ನುಡಿಸುವ ವೇಳೆ ಎಲ್ಲರೂ ಎದ್ದು ನಿಲ್ಲಬೇಕು. ರಾಷ್ಟ್ರಗೀತೆಗೆ ನೀಡುವ ಗೌರವದಂತೆಯೇ ರಾಷ್ಟ್ರೀಯ ಗೀತೆಗೂ ಸಮಾನ ಮಾನ್ಯತೆ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭಗಳು, ರಾಷ್ಟ್ರಪತಿ ಭಾಗವಹಿಸುವ ಕಾರ್ಯಕ್ರಮಗಳು ಸೇರಿದಂತೆ ಪ್ರಮುಖ ಸರ್ಕಾರಿ ವೇದಿಕೆಗಳಲ್ಲೂ ಈ ನಿಯಮ ಅನ್ವಯವಾಗಲಿದೆ. ಸಿನಿಮಾ ಮಂದಿರಗಳಂತಹ ಸಾರ್ವಜನಿಕ ಸ್ಥಳಗಳಲ್ಲೂ ಗೀತೆ ನುಡಿಸುವ ಬಗ್ಗೆ ಸೂಚನೆ ನೀಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts