ದೇಶ

ಸಿಐಎಸ್‌ಎಫ್ ‘ವಂದೇ ಮಾತರಂ’ ಕೋಸ್ಟಲ್ ಸೈಕ್ಲೋಥಾನ್ ಮಂಗಳೂರಿಗೆ!

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು:ರಾಷ್ಟ್ರೀಯ ಭಾವನೆ ಮತ್ತು ಕರಾವಳಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಸಿಐಎಸ್‌ಎಫ್ ‘ವಂದೇ ಮಾತರಂ’ ಕೋಸ್ಟಲ್ ಸೈಕ್ಲೋಥಾನ್-2026 ಫೆಬ್ರವರಿ 18ರಂದು ಮಂಗಳೂರಿಗೆ ಆಗಮಿಸಲಿದೆ. ‘ವಂದೇ ಮಾತರಂ’ 150ನೇ ವಾರ್ಷಿಕೋತ್ಸವದ ಅಂಗವಾಗಿ ಈ ಐತಿಹಾಸಿಕ ಸೈಕ್ಲೋಥಾನ್ ದೇಶದ ಕರಾವಳಿ ಭಾಗಗಳ ಮೂಲಕ ಸಾಗುತ್ತಿದೆ.

maithri

ಜನವರಿ 28ರಂದು ಆರಂಭಗೊಂಡ ಈ ಸೈಕ್ಲೋಥಾನ್ ಫೆಬ್ರವರಿ 21ರಂದು ಕೊಚ್ಚಿಯಲ್ಲಿ ಸಮಾರೋಪಗೊಳ್ಳಲಿದೆ. ರಾಷ್ಟ್ರೀಯ ಏಕತೆ, ಕರಾವಳಿ ಭದ್ರತೆ, ಕರಾವಳಿ ಪ್ರದೇಶಗಳ ಸಬಲೀಕರಣ ಮತ್ತು ಸತತ ಅಭಿವೃದ್ಧಿ ಕುರಿತ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ವರ್ಷಪೂರ್ತಿ ನಡೆಯುವ ಈ ಜನಜಾಗೃತಿ ಅಭಿಯಾನದಲ್ಲಿ ದೈಹಿಕ ಸಾಮರ್ಥ್ಯದ ಜೊತೆಗೆ ಸಾಮಾಜಿಕ ಹೊಣೆಗಾರಿಕೆ, ಪರಿಸರ ಸಂರಕ್ಷಣೆ ಹಾಗೂ ಕರಾವಳಿ ಸಮುದಾಯಗಳ ಸಕ್ರಿಯ ಪಾಲ್ಗೊಳ್ಳುವಿಕೆಗೆ ಉತ್ತೇಜನ ನೀಡಲಾಗುತ್ತಿದೆ. ವಿಶೇಷವಾಗಿ 65 ಮಹಿಳಾ ಸೈಕ್ಲಿಸ್ಟ್‌ಗಳು ಸೇರಿದಂತೆ 130ಕ್ಕೂ ಹೆಚ್ಚು ಸಹಾಯಕ ಸಿಬ್ಬಂದಿ ಈ ಅಭಿಯಾನದಲ್ಲಿ ಭಾಗವಹಿಸುತ್ತಿದ್ದಾರೆ.

ಸೈಕ್ಲೋಥಾನ್ ಮಂಗಳೂರಿಗೆ ಭೇಟಿ ನೀಡುವ ಸಂದರ್ಭದಲ್ಲಿ ಕರಾವಳಿ ಕೇಂದ್ರೀಕೃತ 52 ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕರಾವಳಿ ಭದ್ರತೆ, ಕೌಶಲಾಭಿವೃದ್ಧಿ, ಜೀವನೋಪಾಯ ವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ.ಫೆಬ್ರವರಿ 18ರಂದು ಸಂಜೆ 7 ಗಂಟೆಗೆ ಪಣಂಬೂರು ಬೀಚ್‌ನಲ್ಲಿ ಸೈಕ್ಲೋಥಾನ್ ತಂಡಕ್ಕೆ ಸ್ವಾಗತ ಕಾರ್ಯಕ್ರಮ ನಡೆಯಲಿದೆ. ಫೆಬ್ರವರಿ 19ರಂದು ಮಂಗಳೂರಿನಿಂದ ಸೈಕ್ಲೋಥಾನ್ ಮುಂದಿನ ಗಮ್ಯಸ್ಥಾನದತ್ತ ಪ್ರಯಾಣ ಮುಂದುವರಿಸಲಿದೆ ಎಂದು ಎಸ್‌ಎಫ್‌ಎಫ್ ಎನ್‌ಎಂಪಿ ಘಟಕದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆನ್’ಲೈನ್ ಗೇಮಿಂಗಿಗೆ ಕೇಂದ್ರದ ಅಂಕುಶ!! ಆತ್ಮಹತ್ಯೆ, ಸಾಲಬಾಧೆಯ ಮೊರೆ ಹೋಗುತ್ತಿರುವ ಯುವಕರ ರಕ್ಷಣೆಗೆ ಮುಂದಾದ ಕೇಂದ್ರ!

ದೇಶದ ಯುವಜನತೆ ಆನ್‌ಲೈನ್ ಗೇಮ್‌ಗಳತ್ತ ಹೆಚ್ಚಾಗಿ ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ…

ಮಧ್ಯಪ್ರಾಚ್ಯ ಉದ್ವಿಗ್ನತೆ : ಸಂಕಷ್ಟದಲ್ಲಿನ ಕನ್ನಡಿಗರ ನೆರವಿಗೆ ಉಡುಪಿ ಜಿಲ್ಲಾಡಳಿತದಿಂದ ತುರ್ತು ಸಹಾಯವಾಣಿ

ಮಂಗಳೂರು: ಮಧ್ಯಪ್ರಾಚ್ಯದ ಕೆಲವು ರಾಷ್ಟ್ರಗಳಲ್ಲಿ ಉಂಟಾಗಿರುವ ಅಸ್ಥಿರತೆ ಹಾಗೂ ಅಂತರಾಷ್ಟ್ರೀಯ…