ದೇಶ

ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗೆ ಬ್ರೇಕ್: ಫಾಸ್ಟ್‌ಟ್ಯಾಗ್, ಯುಪಿಐ ಮೂಲಕವೇ ಟೋಲ್ ಪಾವತಿ

GL

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ: ದೇಶದಾದ್ಯಂತ ಇರುವ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ಡಿಜಿಟಲ್ ಪಾವತಿಯನ್ನು ಉತ್ತೇಜಿಸುವ ಉದ್ದೇಶದಿಂದ ಏಪ್ರಿಲ್ 1ರಿಂದ ನಗದು ಪಾವತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

chennai-shopping
maithri

ರಾಷ್ಟ್ರೀಯ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ನೀಡಿದ ಮಾಹಿತಿಯ ಪ್ರಕಾರ, ಈ ನಿಯಮ ಜಾರಿಯಾದ ಬಳಿಕ ಎಲ್ಲಾ ವಾಹನ ಸವಾರರು ಟೋಲ್ ಶುಲ್ಕವನ್ನು ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕವೇ ಪಾವತಿಸಬೇಕಾಗುತ್ತದೆ.

ಈ ಹೊಸ ವ್ಯವಸ್ಥೆಯಿಂದ ಟೋಲ್ ಸಂಗ್ರಹಣೆಯಲ್ಲಿ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆ ಹೆಚ್ಚಿಸುವುದರ ಜೊತೆಗೆ, ಹೆದ್ದಾರಿ ಟೋಲ್ ಪ್ಲಾಜಾಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.

ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ಬಂದರೆ ವಾಹನ ಸವಾರರಿಗೆ ಟೋಲ್ ಪಾವತಿ ಪ್ರಕ್ರಿಯೆ ಸುಲಭವಾಗುವುದರ ಜೊತೆಗೆ, ಟೋಲ್ ಗೇಟ್‌ಗಳಲ್ಲಿ ಉಂಟಾಗುವ ಸಂಚಾರ ದಟ್ಟಣೆ ಕೂಡ ಕಡಿಮೆಯಾಗಲಿದೆ ಎಂದು ಸಚಿವಾಲಯ ತಿಳಿಸಿದೆ.‍

ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ಸುಮಾರು ಶೇಕಡಾ 98ರಷ್ಟು ಫಾಸ್ಟ್‌ಟ್ಯಾಗ್ ಬಳಕೆ ದಾಖಲಾಗಿದ್ದು, ಈ ಹೊಸ ಕ್ರಮದಿಂದ ಡಿಜಿಟಲ್ ಪಾವತಿ ವ್ಯವಸ್ಥೆ ಸಂಪೂರ್ಣವಾಗಿ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

“ಅಲ್ಲಾನೇ ಸರ್ವೋಚ್ಚ, ವಂದೇ ಮಾತರಂ ಹಾಡಲ್ಲ”: ಸಂಚಲನ ಸೃಷ್ಟಿಸಿದ ಪಾಲಿಕೆಯ ಕಾಂಗ್ರೆಸ್ ಸದಸ್ಯರ ವರ್ತನೆ

ಮಧ್ಯಪ್ರದೇಶದ ಇಂದೋರ್ ನಗರ ಪಾಲಿಕೆಯಲ್ಲಿ ಬಜೆಟ್‌ಗೆ ಸಂಬಂಧಿಸಿದ ಚರ್ಚೆಯ ವೇಳೆ ರಾಷ್ಟ್ರೀಯ ಗೀತೆ…