ದೇಶ

ಮಧ್ಯಪ್ರಾಚ್ಯ ಉದ್ವಿಗ್ನತೆ : ಸಂಕಷ್ಟದಲ್ಲಿನ ಕನ್ನಡಿಗರ ನೆರವಿಗೆ ಉಡುಪಿ ಜಿಲ್ಲಾಡಳಿತದಿಂದ ತುರ್ತು ಸಹಾಯವಾಣಿ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮಧ್ಯಪ್ರಾಚ್ಯದ ಕೆಲವು ರಾಷ್ಟ್ರಗಳಲ್ಲಿ ಉಂಟಾಗಿರುವ ಅಸ್ಥಿರತೆ ಹಾಗೂ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳ ವ್ಯತ್ಯಯದ ಹಿನ್ನೆಲೆ ಸಾರ್ವಜನಿಕ ಹಿತದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತವು ವಿಶೇಷ ಸಹಾಯವಾಣಿ ಆರಂಭಿಸಿದೆ.ಇರಾನ್, ಇಸ್ರೇಲ್, ಲೆಬನಾನ್ ಮತ್ತು ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವಾಯುಮಾರ್ಗಗಳನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ ಎಂಬ ವರದಿಯಾಗಿದೆ. ಇದರ ಪರಿಣಾಮವಾಗಿ ದುಬೈ ಸೇರಿದಂತೆ ಮಧ್ಯಪ್ರಾಚ್ಯದ ಹಲವು ಭಾಗಗಳಲ್ಲಿ ಕರ್ನಾಟಕದ ಅನೇಕ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ತುರ್ತು ಕಾರ್ಯಾಚರಣೆ ಕೇಂದ್ರಗಳು 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರ ಕಚೇರಿಗಳಿಂದ ಹೊರಬರುವ ಸೂಚನೆಗಳನ್ನು ಜಿಲ್ಲಾಡಳಿತವು ಸೂಕ್ಷ್ಮವಾಗಿ ಗಮನಿಸುತ್ತಿದೆ.

ಸಹಾಯವಾಣಿ ವಿವರಗಳು:

ಉಡುಪಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ: 0820-2574802

ಉಚಿತ ಸಹಾಯವಾಣಿ: 1077

ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ: 080-22340676 / 080-22253707

ಉಚಿತ ಸಹಾಯವಾಣಿ: 1070

ಉಡುಪಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿ ಹಾಗೂ ನೆರವಿಗಾಗಿ ಮೇಲ್ಕಂಡ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು.ಮಧ್ಯಪ್ರಾಚ್ಯದ ರಾಷ್ಟ್ರಗಳಲ್ಲಿ ಇರುವ ಉಡುಪಿ ಜಿಲ್ಲೆ ಸೇರಿದಂತೆ ಕರ್ನಾಟಕದ ನಿವಾಸಿಗಳು ಆಯಾ ದೇಶಗಳ ಸ್ಥಳೀಯ ಸರ್ಕಾರಗಳು ಹೊರಡಿಸಿರುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಸಂಕಷ್ಟದಲ್ಲಿರುವವರು ಸಂಬಂಧಿತ ದೇಶಗಳಲ್ಲಿನ ಭಾರತೀಯ ರಾಯಭಾರ ಕಚೇರಿಗಳ ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ. ಹಾಗೆಯೇ “ಸಾರಥಿ ಸಹಾಯತಾ” ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳುವಂತೆ ಸೂಚಿಸಲಾಗಿದೆ. ವೀಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್‌ಆರ್‌ಆರ್‌ಒ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗೆ ಬ್ರೇಕ್: ಫಾಸ್ಟ್‌ಟ್ಯಾಗ್, ಯುಪಿಐ ಮೂಲಕವೇ ಟೋಲ್ ಪಾವತಿ

ನವದೆಹಲಿ: ದೇಶದಾದ್ಯಂತ ಇರುವ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ಡಿಜಿಟಲ್ ಪಾವತಿಯನ್ನು…

ರೊಟ್ವೀಲರ್, ಪಿಟ್‌ಬುಲ್ ನಾಯಿಗಳಿಗೆ ನಿಷೇಧ!! ನಾಯಿ ದಾಳಿ ಪ್ರಕರಣಗಳ ಹಿನ್ನೆಲೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡ ಪಾಲಿಕೆ!

ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ರೊಟ್ವೀಲರ್ ಮತ್ತು ಪಿಟ್‌ಬುಲ್ ತಳಿಯ ನಾಯಿಗಳನ್ನು…