tamanvi
ದೇಶ

ಸುವೇಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಪ್ರಕರಣ: ಎಸ್​ಐಟಿ ತನಿಖೆಗೆ ಆದೇಶ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ್ ರಥ ಅವರ ಕೊಲೆ ಪ್ರಕರಣ ರಾಜಕೀಯಧರ್ಳಳೀ ಬಿರುಗಾಳಿಯನ್ನೇ ಎಬ್ಬಿಸಿದೆ.

ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ಘಟನೆಯಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ಎಸ್​ಐಟಿಯನ್ನು ರಚಿಸಲಾಗಿದೆ. ಚಂದ್ರನಾಥ ರಥ್ ಹತ್ಯೆಯ ತನಿಖೆಗಾಗಿ ಮೀಸಲಾದ ಎಸ್‌ಐಟಿಯನ್ನು ರಚಿಸಲಾಗಿದೆ. ಈ ತಂಡಕ್ಕೆ ಇನ್ಸ್‌ಪೆಕ್ಟರ್ ಜನರಲ್ (ಐಜಿ) ಮಟ್ಟದ ಅಧಿಕಾರಿ ನೇತೃತ್ವ ವಹಿಸಲಿದ್ದಾರೆ.

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (ಪಿಎ) ಚಂದ್ರನಾಥ ರಥ್ ಅವರನ್ನು ಬುಧವಾರ ತಡರಾತ್ರಿ ಉತ್ತರ 24 ಪರಗಣದಲ್ಲಿ ಗುಂಡಿಕ್ಕಿ ಕೊಲ್ಲಲಾಗಿದೆ. ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಕೆಲವೇ ದಿನಗಳ ಮೊದಲು ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಹಿಂಸಾಚಾರ ತೀವ್ರಗೊಂಡಿದೆ. ಹಂತಕರಿಗಾಗಿ ಪೊಲೀಸರು ದೊಡ್ಡ ಪ್ರಮಾಣದ ಹುಡುಕಾಟವನ್ನು ಪ್ರಾರಂಭಿಸಿದ್ದಾರೆ. ಈ ಹತ್ಯೆಯ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ.

ಇದನ್ನೂ ಓದಿ: ಇದೊಂದು ಪೂರ್ವ ಯೋಜಿತ ಕೊಲೆ, ಆಪ್ತ ಚಂದ್ರನಾಥ್ ರಥ್ ಸಾವಿನ ಬಗ್ಗೆ ಸುವೇಂದು ಅಧಿಕಾರಿ ಮಾತು

ಈಗಾಗಲೇ ಚಂದ್ರನಾಥ್ ರಥ ಅವರ ಮೃತದೇಹದ ಶವಪರೀಕ್ಷೆ ಮಾಡಲಾಗಿದೆ. ಪ್ರಾಥಮಿಕ ಮರಣೋತ್ತರ ವರದಿಯಲ್ಲಿ ಅವರಿಗೆ ಮೂರು ಗುಂಡೇಟಿನ ಗಾಯಗಳಾಗಿರುವುದಾಗಿ ತಿಳಿದುಬಂದಿದೆ. 7.6 ಬೋರ್ ಸೆಮಿ-ಆಟೋಮ್ಯಾಟಿಕ್ ಪಿಸ್ತೂಲ್‌ನಿಂದ ಅವರನ್ನು ಗುಂಡು ಹಾರಿಸಲಾಗಿದೆ ಎಂದು ಹೇಳಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…