tamanvi
ದೇಶ

ಸಿಎನ್‌ಜಿ ಬೆಲೆ ಮತ್ತೆ 2 ರೂ. ಹೆಚ್ಚಳ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮುಂಬೈ: ಪೆಟ್ರೋಲ್‌, ಡೀಸೆಲ್‌ ಬಳಿಕ ಇದೀಗ ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ದರ ಮತ್ತೆ ಪ್ರತಿ ಕೆಜಿಗೆ 2 ರೂ.ಗಳಷ್ಟು ಹೆಚ್ಚಳ ಮಾಡಲಾಗಿದೆ. ಸರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್ ಸಂಸ್ಥೆಯು ಮುಂಬೈನಲ್ಲಿ ಇಂದಿನ ಅನ್ವಯವಾಗುವಂತೆ ಹೊಸ ದರ ಘೋಷಿಸಿದೆ.

maithri

ಪರಿಷ್ಕೃತ ದರದಲ್ಲಿ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 2 ರೂ. ಹೆಚ್ಚಿಸಲಾಗಿದ್ದು, 86 ರೂ.ಗಳಿಗೆ ಏರಿಕೆಯಾಗಿದೆ. ಇನ್ನೂ ಗೃಹ ಬಳಕೆಯ ಪಿಎನ್‌ಜಿ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್‌ಗೆ 50 ಪೈಸೆ ಹೆಚ್ಚಿಸಲಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬರಲಿದೆ.

ಕಳೆದ ಕೆಲ ದಿನಗಳಲ್ಲಿ ಮುಂಬೈನಲ್ಲಿ ಮಾತ್ರವೇ 2ನೇ ಬಾರಿಗೆ ಮಾಡಿದ ದರ ಏರಿಕೆ ಇದಾಗಿದೆ. ಮೇ 26 ರಂದು ದೆಹಲಿಯಲ್ಲೂ ಸಿಎನ್‌ಜಿ ಬೆಲೆ ಪ್ರತಿ ಕೆಜಿಗೆ 2 ರೂ. ಹೆಚ್ಚಳ ಮಾಡಲಾಗಿತ್ತು. ಇದಕ್ಕೂ ಮುನ್ನ ಮುಂಬೈ ವ್ಯಾಪ್ತಿಯಲ್ಲಿ ಮೇ 14 ರಂದು 2 ರೂ. ಹೆಚ್ಚಳ ಮಾಡಲಾಗಿತ್ತು.

ಸದ್ಯ ಈಗಿನ ಪರಿಷ್ಕೃತ ದರವು ಮುಂಬೈ, ಥಾಣೆ, ನವಿ ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದ (ಎಂಎಂಆರ್) ಇತರ ಭಾಗಗಳಿಗೆ ಅನ್ವಯವಾಗಲಿದೆ. ಸರ್ಕಾರಿ ಅನಿಲ ವಿತರಕ ಮಹಾನಗರ ಗ್ಯಾಸ್ ಲಿಮಿಟೆಡ್ (ಎಂಜಿಎಲ್) ಕಲ್ಯಾಣ್, ರಾಯಗಢ, ರತ್ನಗಿರಿ, ಲಾತೂರ್, ಉಸ್ಮಾನಾಬಾದ್, ಚಿತ್ರದುರ್ಗ ಮತ್ತು ದಾವಣಗೆರೆ ಸೇರಿದಂತೆ ಹಲವಾರು ನಗರಗಳಿಗೆ ಅನಿಲ ಪೂರೈಸುತ್ತದೆ.

ಸಿಎನ್‌ಜಿ ಬೆಲೆ ಹೆಚ್ಚಳವು ದೆಹಲಿಯಲ್ಲಿ ವಾಣಿಜ್ಯ ವಾಹನ ಚಾಲಕರಿಗೆ ಹೆಚ್ಚು ಹೊರೆಯಾಗಲಿದೆ. ಆಟೋಗಳು, ಟ್ಯಾಕ್ಸಿಗಳು, ಶಾಲಾ ವ್ಯಾನ್‌ಗಳು ಮತ್ತು ಖಾಸಗಿ ಕಾರುಗಳು ಸಿಎನ್‌ಜಿಯ ಸಾಮಾನ್ಯ ಬಳಕೆದಾರರಾಗಿದ್ದಾರೆ. ಈ ಬೆಲೆ ಏರಿಕೆಯೂ ಈ ವರ್ಗದ ಚಾಲಕರಿಗೆ ಹೆಚ್ಚು ಆರ್ಥಿಕ ಹೊರೆ ನೀಡಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಬಾಲಿವುಡ್ ನಟರು, ಕ್ರಿಕೆಟ್ ತಾರೆಯರು ಚುನಾವಣಾ ಆಖಾಡಕ್ಕೆ!! | ನಡುರಾತ್ರಿಯ ಬಿಜೆಪಿ ಸಭೆ ನಿರ್ಣಯಿಸಿದ ಆ ಸೆಲಬ್ರಿಟಿಗಳು ಯಾರು?

ನವದೆಹಲಿ: ಖ್ಯಾತ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಹಾಗೂ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌…