tamanvi
ದೇಶ

ಬಕ್ರೀದ್ ದಿನ ವಿಶಾಲ್ ಆಗಿ ಮತಾಂತರಗೊಂಡ ಬಿಲಾಲ್! ಮುಸ್ಲಿಂ ಧರ್ಮ ತ್ಯಜಿಸಿ ಹಿಂದೂ ಧರ್ಮ ಸ್ವೀಕರಿಸಿ ರಾಮಚರಿತ ಮಾನಸ ಪಠಣ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ಬಕ್ರೀದ್ ಆಚರಣೆಯಂದೇ ಬಿಲಾಲ್ ಎಂಬ ಮುಸ್ಲಿಂ ಯುವಕ ಹಿಂದೂ ಧರ್ಮವನ್ನು ಸ್ವೀಕರಿಸಿ ವಿಶಾಲ್ ಆಗಿ ಬದಲಾಗಿದ್ದಾನೆ.

maithri

ಪ್ರಾಣಿಗಳ ಮೇಲಿನ ಅತಿಯಾದ ಕರುಣೆ ಮತ್ತು ಸನಾತನ ಧರ್ಮದ ತತ್ವಗಳಿಗೆ ಆಕರ್ಷಿತನಾಗಿ ಹಿಂದೂ ಧರ್ಮ ಸ್ವೀಕರಿಸಿದ್ದೇನೆ ಎಂದು ಯುವಕ ಹೇಳಿಕೊಂಡಿದ್ದಾನೆ.

ಚಿಕ್ಕ ವಯಸ್ಸಿನಿಂದಲೂ ರಾಜೇಶ್ ಸಾರಂಗ್ ಎಂಬುವವರ ಬಳಿ ಕೆಲಸ ಮಾಡುತ್ತಿದ್ದ ಬಿಲಾಲ್‌ನನ್ನು ಅವರ ಕುಟುಂಬದ ಸದಸ್ಯನಂತೆಯೇ ನೋಡಿಕೊಳ್ಳಲಾಗಿತ್ತು. ಈ ವಾತಾವರಣವು ಆತನ ಮೇಲೆ ಭಾರಿ ಪ್ರಭಾವ ಬೀರಿತ್ತು. ಇತ್ತೀಚೆಗೆ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ನಡೆದ ಪ್ರಾಣಿ ಬಲಿಯನ್ನು ಕಂಡು ನೊಂದ ಬಿಲಾಲ್, ಎಲ್ಲಾ ಜೀವಿಗಳ ಮೇಲಿನ ದಯೆಯನ್ನು ಸಾರುವ ಸರ್ವೇ ಭವಂತು ಸುಖಿನಃ ಎಂಬ ಹಿಂದೂ ಧರ್ಮದ ತತ್ವಕ್ಕೆ ಮಾರುಹೋಗಿ ಧರ್ಮ ಬದಲಿಸುವ ನಿರ್ಧಾರ ಕೈಗೊಂಡಿದ್ದಾನೆ.

ಖಾಂಡ್ವಾದ ಪ್ರಸಿದ್ಧ ದೇವಸ್ಥಾನದಲ್ಲಿ ನಡೆದ ಸಾಂಪ್ರದಾಯಿಕ ‘ಘರ್ ವಾಪಸಿ’ ಆಚರಣೆಯ ಭಾಗವಾಗಿ ಆತನಿಗೆ ಪಂಚಗವ್ಯ, ಗಂಗಾಜಲ ಮತ್ತು ಪವಿತ್ರ ದ್ರವ್ಯಗಳಿಂದ ಹತ್ತು ವಿಧದ ಸ್ನಾನ ಮಾಡಿಸಲಾಯಿತು. ಬಳಿಕ ಆತ ತಲೆ ಬೋಳಿಸಿಕೊಂಡು ಯಜ್ಞ ಮತ್ತು ಶಿವಪೂಜೆಯಲ್ಲಿ ಪಾಲ್ಗೊಂಡಿದ್ದಾನೆ. ಸನಾತನ ಧರ್ಮದ ನಿಯಮಗಳನ್ನು ಪಾಲಿಸುವುದಾಗಿ ಪ್ರಮಾಣ ಮಾಡಿದ ವಿಶಾಲ್, ಅತ್ಯಂತ ಭಕ್ತಿಯಿಂದ ರಾಮಚರಿತಮಾನಸ ಗ್ರಂಥವನ್ನು ತನ್ನ ಹಣೆಯ ಮೇಲಿಟ್ಟುಕೊಂಡು ಇನ್ಮುಂದೆ ದಿನವೂ ಅದನ್ನು ಪಠಿಸುವುದಾಗಿ ಪ್ರತಿಜ್ಞೆ ಮಾಡಿದ್ದಾನೆ.

ನನಗೆ ಸನಾತನ ಧರ್ಮ ತುಂಬಾ ಇಷ್ಟ, ನಾನು ಅದಕ್ಕೆ ಸೇರಲೇಬೇಕಿತ್ತು, ನಾನು ಮೊದಲಿನಿಂದಲೂ ಅದರ ಆಚರಣೆಗಳನ್ನು ಅನುಸರಿಸುತ್ತಿದ್ದೇನೆ. ಬಕ್ರೀದ್ ದಿನದಂದು, ಮುಗ್ಧ ಪ್ರಾಣಿಗಳಿಗೆ ಪರಿಸ್ಥಿತಿಯನ್ನು ನನ್ನಿಂದ ನೋಡಲಾಗಲಿಲ್ಲ ಎಂದು ಅವರು ಹೇಳಿದರು. ಬಾಲ್ಯದಿಂದಲೂ ಹಿಂದೂ ಧರ್ಮದ ಬಗ್ಗೆ ಆಸಕ್ತಿ ಇತ್ತು ಎಂದು ವಿಶಾಲ್ ಹೇಳಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…