ದೇಶ

ಭಾರತದ ಭೂಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ್ ಸೇಠ್ ಅಧಿಕಾರ ಸ್ವೀಕಾರ | ಸೇನಾ ಕುಟುಂಬದ ಈ ಧೀರ ಆರ್ಮರ್ಡ್ ಕಾರ್ಪ್ಸ್ ವಿಭಾಗದ ಅಪರೂಪದ ಅಧಿಕಾರಿ!

Saraswathi

ಈ ಸುದ್ದಿಯನ್ನು ಶೇರ್ ಮಾಡಿ

ಜನರಲ್ ಧೀರಜ್ ಸೇಠ್ ಮಂಗಳವಾರ ಭಾರತದ 31ನೇ ಭೂಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು. ಅವರು ಭೂಸೇನೆಯ ಉಪಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು.

maithri

ಭಾರತೀಯ ಭೂಸೇನೆಯಲ್ಲಿ 4 ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಜನರಲ್ ಉಪೇಂದ್ರ ದ್ವಿವೇದಿ ಅವರ ಉತ್ತರಾಧಿಕಾರಿಯಾಗಿದ್ದಾರೆ. ಆರ್ಮರ್ಡ್ ಕಾರ್ಪ್ಸ್ (ಟ್ಯಾಂಕ್ ರೆಜಿಮೆಂಟ್) ವಿಭಾಗದ ಅಧಿಕಾರಿಯಾಗಿರುವ ಇವರು, 1997ರಲ್ಲಿ ನಿವೃತ್ತರಾದ ಜನರಲ್ ಶಂಕರ್ ರಾಯ್ ಚೌಧರಿ ಅವರ ನಂತರ ಕಳೆದ ಮೂರು ದಶಕಗಳಲ್ಲಿ ಈ ಅತ್ಯುನ್ನತ ಹುದ್ದೆಗೇರಿದ ಮೊದಲ ಆರ್ಮರ್ಡ್ ಕಾರ್ಪ್ಸ್ ಅಧಿಕಾರಿಯಾಗಿದ್ದಾರೆ.

ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಿಂದ ಪದವಿ ಪಡೆದು ಡಿಸೆಂಬರ್ 1986ರಲ್ಲಿ ಸೇನೆಗೆ ಸೇರಿದ ಜನರಲ್ ಧೀರಜ್ ಸೇಠ್ ಅವರಿಗೆ ಸುಮಾರು 40 ವರ್ಷಗಳ ಮಿಲಿಟರಿ ಅನುಭವವಿದೆ. ತಮ್ಮ ಸುದೀರ್ಘ ವೃತ್ತಿ ಜೀವನದಲ್ಲಿ ಅವರು ದೇಶಾದ್ಯಂತ ಹಲವು ಪ್ರಮುಖ ಕಾರ್ಯಾಚರಣೆ, ಕಮಾಂಡ್ ಮತ್ತು ಸ್ಟಾಫ್ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಅವರು ಆರ್ಮರ್ಡ್ ರೆಜಿಮೆಂಟ್, ಆರ್ಮರ್ಡ್ ಬ್ರಿಗೇಡ್, ಸ್ಟ್ರೈಕ್ ಕಾರ್ಪ್ಸ್ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ನಿಯೋಜಿಸಲಾದ ಪಡೆಗಳ ನೇತೃತ್ವ ವಹಿಸಿದ್ದರು. ಅಲ್ಲದೆ, ಭಾರತದ ಪಶ್ಚಿಮ ಗಡಿಯ ರಕ್ಷಣೆಯ ಜವಾಬ್ದಾರಿ ಹೊಂದಿರುವ ಕಾರ್ಯತಂತ್ರದ ಪ್ರಮುಖ ಕಮಾಂಡ್‌ಗಳಾದ ಸದರ್ನ್ ಕಮಾಂಡ್ ಮತ್ತು ಸೌತ್ ವೆಸ್ಟರ್ನ್ ಕಮಾಂಡ್ ಎರಡನ್ನೂ ಮುನ್ನಡೆಸಿದ್ದಾರೆ.

4 ದಶಕಗಳ ಕಾಲ ಸೇವೆ ಸಲ್ಲಿಸಿರುವ ಇವರು, ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಜೈಪುರ ಮೂಲದ ಸೌತ್ ವೆಸ್ಟರ್ನ್ ಕಮಾಂಡ್ ಮತ್ತು ಪುಣೆ ಮೂಲದ ಸದರ್ನ್ ಕಮಾಂಡ್ ಹೀಗೆ ಎರಡು ಪ್ರಮುಖ ಕಾರ್ಯಾಚರಣೆಯ ಕಮಾಂಡ್‌ಗಳ ನೇತೃತ್ವ ವಹಿಸಿದ ಅಪರೂಪದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರ ವಿಶಿಷ್ಟ ಸೇವೆಗಾಗಿ ಪರಮ ವಿಶಿಷ್ಟ ಸೇವಾ ಪದಕ (PVSM), ಉತ್ತಮ ಯುದ್ಧ ಸೇವಾ ಪದಕ (UYSM) ಮತ್ತು ಅತಿ ವಿಶಿಷ್ಟ ಸೇವಾ ಪದಕಗಳನ್ನು (AVSM) ನೀಡಿ ಗೌರವಿಸಲಾಗಿದೆ.

ಧೀರಜ್ ಸೇಠ್ ಅವರ ತಂದೆ ಕೃಷ್ಣ ಮೋಹನ್ ಸೇಠ್ ಕೂಡ ಭಾರತೀಯ ಸೇನೆಯಲ್ಲಿ ಅಡ್ಜುಟೆಂಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದರು. ನಂತರ ಅವರು ಛತ್ತೀಸ್‌ಗಢ ಮತ್ತು ಮಧ್ಯಪ್ರದೇಶದ ರಾಜ್ಯಪಾಲರಾಗಿದ್ದರು. ಇವರ ಕಿರಿಯ ಸಹೋದರ ರವನೀಶ್ ಸೇಠ್ ಭಾರತೀಯ ನೌಕಾಸೇನೆಯಲ್ಲಿ ರಿಯರ್ ಅಡ್ಮಿರಲ್ ಆಗಿದ್ದಾರೆ.

ಸಾಮರ್ಥ್ಯ ವೃದ್ಧಿ ಮತ್ತು ಮಿಲಿಟರಿ ಸುಧಾರಣೆಗಳಲ್ಲಿ ಜನರಲ್ ಸೇಠ್ ಪ್ರಮುಖ ಪಾತ್ರ ವಹಿಸಿದ್ದಾರೆ. ಭಾರತೀಯ ಸೇನೆಯು ಆಧುನೀಕರಣ, ತಂತ್ರಜ್ಞಾನದ ಮೇಲ್ದರ್ಜೀಕರಣ ಮತ್ತು ಭಾರತದ ಗಡಿಗಳಲ್ಲಿ ಕಾರ್ಯಾಚರಣೆಯ ಸನ್ನದ್ಧತೆಯನ್ನು ಕಾಯ್ದುಕೊಳ್ಳುವತ್ತ ಗಮನಹರಿಸುತ್ತಿರುವ ಸಮಯದಲ್ಲಿ ಈ ನಾಯಕತ್ವದ ಬದಲಾವಣೆ ನಡೆದಿದೆ.

ಪ್ರಸ್ತುತ ನಡೆಯುತ್ತಿರುವ ಹಲವು ಸುಧಾರಣೆಗಳನ್ನು ಅವರ ಪೂರ್ವಾಧಿಕಾರಿ ಜನರಲ್ ಉಪೇಂದ್ರ ದ್ವಿವೇದಿ ಅವರ ಅವಧಿಯಲ್ಲಿ ಪ್ರಾರಂಭಿಸಲಾಗಿತ್ತು. ಆದರೆ, ಈ ಯೋಜನೆಗಳನ್ನು ವಾಸ್ತವ ರೂಪಕ್ಕೆ ತರುವ ಜವಾಬ್ದಾರಿ ಜನರಲ್ ಸೇಠ್ ಅವರ ಮೇಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬಕ್ರೀದ್ ದಿನ ವಿಶಾಲ್ ಆಗಿ ಮತಾಂತರಗೊಂಡ ಬಿಲಾಲ್! ಮುಸ್ಲಿಂ ಧರ್ಮ ತ್ಯಜಿಸಿ ಹಿಂದೂ ಧರ್ಮ ಸ್ವೀಕರಿಸಿ ರಾಮಚರಿತ ಮಾನಸ ಪಠಣ!

ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ಬಕ್ರೀದ್ ಆಚರಣೆಯಂದೇ ಬಿಲಾಲ್ ಎಂಬ ಮುಸ್ಲಿಂ ಯುವಕ ಹಿಂದೂ…