tamanvi
ದೇಶ

ನೀಟ್ ಪರೀಕ್ಷೆ ಸಂಪೂರ್ಣ ರದ್ದುಪಡಿಸಿ: ಟಿವಿಕೆ ಆಗ್ರಹ!

ಈ ಸುದ್ದಿಯನ್ನು ಶೇರ್ ಮಾಡಿ

ನೀಟ್ ಪ್ರಶ್ನೆ ಪರೀಕ್ಷೆ ಸೋರಿಕೆ ಹಿನ್ನೆಲೆ ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯ ನಡುವೆಯೇ ತಮಿಳುನಾಡಿನ ಸಿಎಂ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ, ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಆಗ್ರಹಿಸಿದೆ.

ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕು. ಶಿಕ್ಷಣವನ್ನು ಕೇಂದ್ರದ ಸಮವರ್ತಿ ಪಟ್ಟಿಯಿಂದ ರಾಜ್ಯ ಪಟ್ಟಿಗೆ ವರ್ಗಾಯಿಸಬೇಕು. ಸಾಧ್ಯವಾಗದಿದ್ದರೆ, ಮಧ್ಯಂತರ ಕ್ರಮವಾಗಿ ವಿಶೇಷ ವ್ಯವಸ್ಥೆ ರೂಪಿಸಿ ರಾಜ್ಯಗಳಿಗೆ ವೈದ್ಯಕೀಯ ಶಿಕ್ಷಣ ಸೇರಿದಂತೆ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಅಧಿಕಾರ ನೀಡಬೇಕು ಎಂದು ಟಿವಿಕೆ ಹೇಳಿಕೆ ಪ್ರಕಟಿಸಿದೆ.

ನೀಟ್ ರದ್ದು ಮಾಡುತ್ತೇವೆ ಎಂದು ಹೇಳಿ ಜನರ ಮತ ಪಡೆಯುವ ರಾಜಕೀಯವನ್ನು ನಾವು ಮಾಡುವುದಿಲ್ಲ ಎಂದು ಪರೋಕ್ಷವಾಗಿ ಡಿಎಂಕೆ ಪಕ್ಷವನ್ನು ಟಿವಿಕೆ ಟೀಕಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…