pashupathi
ದೇಶ

ಬಾಣಂತಿಯರ ಸಾವು: ಔಷಧ ಕಂಪೆನಿ ಕಪ್ಪು ಪಟ್ಟಿಗೆ!!

tv clinic
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪದ ಮೇರೆಗೆ ಡ್ರಗ್ ಕಂಟ್ರೋಲ‌ರ್ ಉಮೇಶ್ ಅವರನ್ನು ರಾಜ್ಯ ಸರಕಾರ ಅಮಾನತು ಮಾಡಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪದ ಮೇರೆಗೆ ಡ್ರಗ್ ಕಂಟ್ರೋಲ‌ರ್ ಉಮೇಶ್ ಅವರನ್ನು ರಾಜ್ಯ ಸರಕಾರ ಅಮಾನತು ಮಾಡಿದೆ. ಜತೆಗೆ ರಿಂಗರ್ ಲ್ಯಾಕ್ಟೇಟ್ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಲದ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ ಕಂಪೆನಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ.

akshaya college

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಮೃತ ಬಾಣಂತಿಯರ ಕುಟುಂಬಕ್ಕೆ ಸರಕಾರದಿಂದ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಔಷಧ ಕಂಪೆನಿಯಿಂದಲೂ ಪರಿಹಾರ ವಸೂಲಿ ಮಾಡಿ, ನೀಡಲು ಸೂಚಿಸಲಾಗಿದೆ. ಈ ಔಷಧದಿಂದ ರಾಜ್ಯದ ಇತರೆಡೆ ಎಲ್ಲಾದರೂ ಸಮಸ್ಯೆ ಆಗಿದೆಯೇ ಎನ್ನುವ ಬಗ್ಗೆ ಸಮಗ್ರ ವರದಿ ತರಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಸಭೆಯ ಬಳಿಕ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು

ಮೃತ ಬಾಣಂತಿಯರ ಕುಟುಂಬಕ್ಕೆ ಸರಕಾರದಿಂದ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಔಷಧ ಕಂಪೆನಿಯಿಂದಲೂ ಪರಿಹಾರ ವಸೂಲಿ ಮಾಡಿ, ನೀಡಲು ಸೂಚಿಸಲಾಗಿದೆ. ಈ ಔಷಧದಿಂದ ರಾಜ್ಯದ ಇತರೆಡೆ ಎಲ್ಲಾದರೂ ಸಮಸ್ಯೆ ಆಗಿದೆಯೇ ಎನ್ನುವ ಬಗ್ಗೆ ಸಮಗ್ರ ವರದಿ ತರಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಸಭೆಯ ಬಳಿಕ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

ಸಭೆಯಲ್ಲೇನು ಚರ್ಚೆ?

ಮೆಡಿಸಿನ್ ಮಾಫಿಯಾ ನಿಯಂತ್ರಣಕ್ಕೆ ಅತ್ಯಂತ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕಾದ ಅನಿವಾರ್ಯ ಇದೆ ಎನ್ನುವ ಅಭಿಪ್ರಾಯ ಸಭೆಯಲ್ಲಿ ಹಲವರಿಂದ ವ್ಯಕ್ತವಾಗಿವೆ. ಮೊದಲಿಗೆ ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯುವುದು ಹಾಗೂ ತಮಿಳುನಾಡು ಮಾದರಿಯಲ್ಲಿ ಡ್ರಗ್ ನಿಯಂತ್ರಣಕ್ಕೆ ಹೊಸ ರೂಪುರೇಷೆ, ನಿಯಮಾವಳಿ ರಚಿಸುವ ಬಗ್ಗೆ ಸುದೀರ್ಘವಾಗಿ ಚರ್ಚೆಗಳು ಆಗಿವೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts