Gl harusha
ದೇಶ

ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟ; ಹೊಸ ಇತಿಹಾಸ ಸೃಷ್ಟಿಸಿದ ಕರ್ನಾಟಕ ಹೈಕೋರ್ಟ್!

ಹೈಕೋರ್ಟ್ ನಲ್ಲಿ ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಲಾಗಿದೆ. ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ. ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠದಿಂದ ಮಹತ್ವದ ಕ್ರಮ ಕೈಗೊಂಡಿದ್ದು, ಕನ್ನಡ ಭಾಷೆಯಲ್ಲಿ ತೀರ್ಪು ಪ್ರಕಟಿಸಲಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಹೈಕೋರ್ಟ್ ನಲ್ಲಿ ಇದೇ ಮೊದಲ ಬಾರಿಗೆ

srk ladders
Pashupathi
Muliya

ಕನ್ನಡದಲ್ಲೇ ತೀರ್ಪು ಪ್ರಕಟಿಸಲಾಗಿದೆ. ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ. ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠದಿಂದ ಮಹತ್ವದ ಕ್ರಮ ಕೈಗೊಂಡಿದ್ದು, ಕನ್ನಡ ಭಾಷೆಯಲ್ಲಿ ತೀರ್ಪು ಪ್ರಕಟಿಸಲಾಗಿದೆ.

ನಿನ್ನೆ ಭಾರತ ಭಾಷಾ ದಿನದ ಪ್ರಯುಕ್ತ ಸಾಂಕೇತಿಕವಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲಾಗಿದೆ.

ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ತೀರ್ಪು ಪ್ರಕಟಿಸಲಾಗಿದೆ. ಇದೇ ಮೊದಲ ಬಾರಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಕನ್ನಡದಲ್ಲಿ ತೀರ್ಪು ಪ್ರಕಟಿಸಲಾಗಿದೆ. ನಂಜಾವಧೂತ ಸ್ವಾಮೀಜಿ ವಿರುದ್ಧ ಎಸ್‌. ಲಿಂಗಣ್ಣ ಪ್ರಕರಣದಲ್ಲಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲಾಗಿದೆ.

ಇಂಗ್ಲೆಂಡ್ನಲ್ಲಿ 1730 ರವರೆಗೆ ಲ್ಯಾಟಿನ್ ಭಾಷೆಯಲ್ಲಿ ಕೋರ್ಟ್ ಕಲಾಪ ನಡೆಸಲಾಗುತ್ತಿತ್ತು. 1730 ರಿಂದ ಅವರ ಸ್ವಭಾಷೆ ಇಂಗ್ಲಿಷ್ ನಲ್ಲಿಯೇ ಕಲಾಪವನ್ನು ಆರಂಭಿಸಲಾಗಿತ್ತು. ಜನಸಾಮಾನ್ಯರಿಗೆ ಕೋರ್ಟ್ ತೀರ್ಪು ಏನಿದೆ ಎಂದು ತಿಳಿಯಬೇಕೆಂದು ಈ ಉಪಕ್ರಮ ಕೈಗೊಳ್ಳಲಾಗಿದೆ. ಕನ್ನಡ ಅವಸಾನವಾಗಬಾರದು ಎಂದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳು ಕನ್ನಡದಲ್ಲಿಯೇ ವ್ಯವಹರಿಸಬಹುದು ಎಂದು ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ.ಸಿ.ಎಂ. ಜೋಶಿ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts