Jayalalitha ಅವರಿಗೆ ಸೇರಿದ ಕೋಟ್ಯಾಂತರ ಬೆಲೆಯ ಆಸ್ತಿ, ಆಭರಣ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ಬೆಂಗಳೂರು ಕೋರ್ಟ್ ಆದೇಶಿಸಿದೆ.
ಸಿಬಿಐ, ಜಾರಿ ನಿರ್ದೇಶನಾಲಯದ (ಇ.ಡಿ) ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು ಜಯಲಲಿತಾ ಅವರಿಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಆಭರಣ ಹಾಗೂ ಆಸ್ತಿಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರಕಾರದ ಸುಪರ್ದಿಗೆ ನೀಡುವಂತೆ ಆದೇಶಿಸಿದೆ.
ನಗದು, ವಜ್ರಾಭರಣ ಬಿಡುಗಡೆಗೆ ಕೋರಿಕೆ: ಮಾಜಿ ಸಿಎಂ ಜಯಲಲಿತಾ ಸೋದರ ಸಂಬಂಧಿಗಳ ಮೇಲ್ಮನವಿ ವಜಾ ಮಾಡಿದ ಹೈಕೋರ್ಟ್
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬೆಂಗಳೂರಿನ ವಿಶೇಷ ನ್ಯಾಯಾಲಯವು ಜಯಲಲಿತಾ ಅವರಿಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂಪಾಯಿ ದಂಡ ವಿಧಿಸಿ 2014ರ ಸೆಪ್ಟೆಂಬರ್ 27ರಂದು ಆದೇಶಿಸಿತ್ತು. ಜೊತೆಗೆ ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು.
ಜಯಲಲಿತಾ ಚಿನ್ನಾಭರಣ ಪಡೆಯಲು ಆರು ದೊಡ್ಡ ಟ್ರಂಕ್ ಜೊತೆ ಬರಲು ತಮಿಳುನಾಡು ಸರ್ಕಾರಕ್ಕೆ ವಿಶೇಷ ನ್ಯಾಯಾಲಯದ ಆದೇಶ
ಈ ಹಿನ್ನೆಲೆಯಲ್ಲಿ ಆರ್‌ಟಿಐ ಕಾರ್ಯಕರ್ತ ನರಸಿಂಹ ಮೂರ್ತಿ ಅವರು ಜಯಲಲಿತಾ ಅವರ ವಸ್ತುಗಳ ವಿಲೇವಾರಿಗೆ ಕೈಗೊಂಡಿರುವ ಕ್ರಮದ ಮಾಹಿತಿ ನೀಡುವ ಸಂಬಂಧ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಏನೆಲ್ಲಾ ವಸ್ತುಗಳಿವೆ: 7,040 ಗ್ರಾಂ ತೂಕದ 468 ಬಗೆಯ
ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ ಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು
250ಶಾಲುಗಳು,, 12 ರೇಫ್ರೀಜರೇಟರ್, 10 3 ໖, 8 2, 1 2 ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ- ಇನ್ ವನ್ ಟೇಪ್ ರೆಕಾರ್ಡರ್,2 , 1,040 ವೆಡೀಯೋ ರೆಕಾರ್ಡ್, 3 ಐರನ್ ಲಾಕರ್, 1,93,202 ರೂಪಾಯಿ ನಗದು ಸೇರಿದಂತೆ ಹಲವು ವಸ್ತುಗಳು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.