pashupathi
ದೇಶ

ಲ್ಯಾಡಿಂಗ್ ವೇಳೆ ರನ್‌ ವೇಯಲ್ಲೇ ತಲೆ ಕೆಳಗಾಗಿ ಬಿದ್ದ ವಿಮಾನ.!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಲ್ಯಾಂಡಿಂಗ್ ವೇಳೆ ವಿಮಾನವೊಂದು ಪಲ್ಟಿ

akshaya college

ಹೊಡೆದ ಪರಿಣಾಮ ಹದಿನೆಂಟು ಮಂದಿ ಗಾಯಗೊಂಡಿರುವ ಘಟನೆ ಕೆನಡಾದ ಟೊರೊಂಟೊ ಪಿಯರ್ಸನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸಂಭವಿಸಿದೆ.

ನಾಲ್ವರು ಸಿಬ್ಬಂದಿಗಳು ಸೇರಿ ಒಟ್ಟು ಎಂಬತ್ತು ಮಂದಿ ಪ್ರಯಾಣಿಸುತ್ತಿದ್ದ ಡೆಲ್ಟಾ ಏರ್‌ಲೈನ್ಸ್ ವಿಮಾನ ಯುಎಸ್ ನ ಮಿನ್ನಿಯಾಪೋಲಿಸ್‌ನಿಂದ ಹೊರತು ಟೊರೊಂಟೊದ ಪಿಯರ್ಸನ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ಬಲವಾಗಿ ಬೀಸಿದ ಗಾಳಿಯ ಹೊಡೆತಕ್ಕೆ ವಿಮಾನ ನಿಯಂತ್ರಣ ಕಳೆದುಕೊಂಡು ಮಂಜಿನ ರಾಶಿಯ ಮೇಲೆ ಪಲ್ಟಿ ಹೊಡೆದಿದೆ ಎಂದು ವಿಮಾನಯಾನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಒಂದು ಮಗು ಸೇರಿದಂತೆ ಹದಿನೆಂಟು ಮಂದಿಗೆ ಗಾಯಗಳಾಗಿದ್ದು ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದ್ದು ವಿಮಾನ ಪಲ್ಟಿಯಾಗುತ್ತಿದ್ದಂತೆ ವಿಮಾನ ಸಿಬ್ಬಂದಿಗಳು ಹಾಗೂ ರಕ್ಷಣಾ ತಂಡ ವಿಮಾನದಲ್ಲಿದ್ದ ಪ್ರಯಾಣಿಕರನ್ನು ರಕ್ಷಣೆ ಮಾಡಿದೆ ಅಲ್ಲದೆ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಿದೆ.

ಹವಾಮಾನ ವೈಪರೀತ್ಯ ಬಲವಾದ ಗಾಳಿಯಿಂದ ವಿಮಾನ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು ಘಟನೆ ಕುರಿತು ತನಿಖೆ ನಡೆಸುವುದಾಗಿ ವಿಮಾನಯಾನ ಸಂಸ್ಥೆ ಮಾಹಿತಿ ನೀಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts