pashupathi
ದೇಶ

ದೆಹಲಿ  ಸಿಎಂ ಆಗಿ ರೇಖಾ ಗುಪ್ತ ಇಂದು ಪ್ರಮಾಣವಚನ ಸ್ವೀಕಾರ 

tv clinic
ಇಂದು ದೆಹಲಿ ಮುಖ್ಯಮಂತ್ರಿಯವರ ಪ್ರಮಾಣ ವಚನ ಸ್ವೀಕಾರ (ಫೆ.20) ಮಧ್ಯಾಹ್ನ 12:35 ಕ್ಕೆ ರಾಮಲೀಲಾ ಮೈದಾನದಲ್ಲಿ ನಡೆಯಲಿದೆ. ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಘೋಷಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಇಂದು ದೆಹಲಿ ಮುಖ್ಯಮಂತ್ರಿಯವರ (Delhi chief minister- Rekha Gupta)ಪ್ರಮಾಣ ವಚನ ಸ್ವೀಕಾರ (ಫೆ.20) ಮಧ್ಯಾಹ್ನ 12:35 ಕ್ಕೆ ರಾಮಲೀಲಾ ಮೈದಾನದಲ್ಲಿ ನಡೆಯಲಿದೆ. ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಘೋಷಿಸಿದೆ.

akshaya college

ದೆಹಲಿಯ ಮುಖ್ಯ ಕಾರ್ಯದರ್ಶಿ ಕಳುಹಿಸಿರುವ ಆಹ್ವಾನ ಪತ್ರಿಕೆಯಲ್ಲಿ, ಮುಖ್ಯಮಂತ್ರಿಯೊಂದಿಗೆ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಉಲ್ಲೇಖವೂ ಇದೆ ಎಂದು ವರದಿಗಳು ಉಲ್ಲೇಖಿಸಿವೆ. ಈ ಕಾರ್ಯಕ್ರಮದಲ್ಲಿ 30 ಸಾವಿರ ಅತಿಥಿಗಳು ಭಾಗವಹಿಸುವ ನಿರೀಕ್ಷೆಯಿದೆ.

ರೇಖಾ ಗುಪ್ತಾ ಅವರು ಸಾರ್ವಜನಿಕ ಸೇವಾ ಅನುಭವ ಹೊಂದಿರುವ ಬಗ್ಗೆ ಪಕ್ಷ ಹಾಗೂ ಆರ್‌ಎಸ್‌ಎಸ್‌ ವಲಯದಲ್ಲೂ ಉತ್ತಮ ಅಭಿಪ್ರಾಯಗಳನ್ನು ಹೊಂದಿದ್ದಾರೆ. ಶಾಲಿಮಾರ್ ಬಾಗ್ ಕ್ಷೇತ್ರದಲ್ಲಿ ಎಎಪಿಯ ಅಭ್ಯರ್ಥಿ ವಂದನಾ ಕುಮಾರಿ ಅವರ ವಿರುದ್ಧ ರೇಖಾ ಅವರು ಗೆಲುವು ಸಾಧಿಸಿದ್ದಾರೆ. ಇನ್ನು ಪರ್ವೇಶ್ ವರ್ಯಾ ಅವರು ಮಾಜಿ ಸಿಎಂ ಅರವಿಂದ್ ಕೇಜ್ರವಾಲ್ ಅವರ ವಿರುದ್ಧ ನವದೆಹಲಿ ಕ್ಷೇತ್ರದಿಂದ ಗೆದ್ದಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts