Thursday, November 21
Share News

ನೀಟ್‌, ನೆಟ್‌ ಪರೀಕ್ಷೆಗಳಲ್ಲಿ ಅಕ್ರಮದ ಆರೋಪ ಕೇಳಿ ಬಂದ ಬೆನ್ನಲ್ಲೇ ಕೇಂದ್ರ ಸರ್ಕಾರ ಸಾರ್ವಜನಿಕ ಹಾಗೂ ಸಾಮಾನ್ಯ ಪ್ರವೇಶಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಅಕ್ರಮ ತಡೆಯುವುದಕ್ಕಾಗಿ ಸಾರ್ವಜನಿಕ ಪರೀಕ್ಷೆ (ಅಕ್ರಮ ತಡೆ) 2024ಕ್ಕೆ ಅಧಿಸೂಚನೆ ಹೊರಡಿಸಿದೆ.

ತಪ್ಪಿತಸ್ಥರಿಗೆ ಕನಿಷ್ಠ 3ರಿಂದ 5 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡವನ್ನು ಈ ಕಾಯ್ದೆಯು ಹೊಂದಿದೆ. ಯಾವುದೇ ವ್ಯಕ್ತಿ, ಗುಂಪು, ಸಂಸ್ಥೆ, ಪರೀಕ್ಷಾ ಅಧಿಕಾರಿಗಳು ಕೃತ್ಯವೆಸಗಿದಲ್ಲಿ ಕನಿಷ್ಠ 5-10 ವರ್ಷ ಜೈಲು, 1 ಕೋಟಿ ರೂ. ದಂಡ ವಿಧಿಸಲಾಗುತ್ತದೆ. ಕಾಯ್ದೆಯಲ್ಲಿ ಯುಪಿಎಸ್‌ಸಿ, ಎಸ್‌ಎಸ್‌ಸಿ, ರೈಲ್ವೇ, ಬ್ಯಾಂಕಿಂಗ್‌, ಎನ್‌ಟಿಎ ನಡೆಸುವ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗಳು ಒಳಗೊಂಡಿವೆ.

ನೀಟ್‌ ಕೌನ್ಸೆಲಿಂಗ್‌ಗೆ ತಡೆಯಾಜ್ಞೆ ನೀಡಲ್ಲ: ಸುಪ್ರೀಂ ಕೋರ್ಟ್‌ ಸ್ಪಷ್ಟನೆ
ಅಕ್ರಮ ಹಿನ್ನೆಲೆಯಲ್ಲಿ ನೀಟ್‌ ಕೌನ್ಸೆಲಿಂಗ್‌ ಪ್ರಕ್ರಿಯೆಗೆ ತಡೆಯಾಜ್ಞೆ ತರಬೇಕು ಎಂಬ ಕೋರಿಕೆಯನ್ನು ಸುಪ್ರೀಂ ಕೋರ್ಟ್‌ ತಳ್ಳಿ ಹಾಕಿದೆ.
ಕೌನ್ಸೆಲಿಂಗ್‌ ಆರಂಭಿಸಿ, ನಿಲ್ಲಿಸುವ ಪ್ರಕ್ರಿಯೆ ಇಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ವಿಚಾರಣೆ ಜು.8ಕ್ಕೆ ಮುಂದೂಡಿರುವ ಕಾರಣ, ಜು.6ರಿಂದ ಆರಂಭವಾಗಲಿರುವ ಕೌನ್ಸೆಲಿಂಗ್‌ ಅನ್ನು 2 ದಿನ ತಡವಾಗಿ ಆರಂಭಿಸಬಹುದಲ್ಲವೇ ಎಂದು
ಅರ್ಜಿದಾರರ ಪರ ವಕೀಲರು ಕೇಳಿಕೊಂಡರು. ಆದರೆ, ನ್ಯಾಯಪೀಠ ಅದಕ್ಕೆ ಒಪ್ಪಲಿಲ್ಲ

ಮರು ಪರೀಕ್ಷೆ ಪ್ರವೇಶಪತ್ರ ಬಿಡುಗಡೆ: 6 ಕೇಂದ್ರ ಬದಲು

ಕೃಪಾಂಕ ಪಡೆದ 1563 ವಿದ್ಯಾರ್ಥಿಗಳಿಗಾಗಿ ನೀಟ್‌-ಯುಜಿ ಮರುಪರೀಕ್ಷೆ ಭಾನುವಾರ ನಡೆಯಲಿದ್ದು, ಅಡ್ಮಿಟ್‌ ಕಾರ್ಡ್‌ಗಳನ್ನು ಶುಕ್ರವಾರವೇ ಬಿಡುಗಡೆ ಮಾಡಲಾಗಿದೆ. ಜತೆಗೆ ಈ ಅಭ್ಯರ್ಥಿಗಳು ಕಳೆದ ಬಾರಿ ಬರೆದಿದ್ದ ಪರೀಕ್ಷಾ ಕೇಂದ್ರಗಳನ್ನು ಬದಲಿಸಿ, 6 ಹೊಸ ಕೇಂದ್ರಗ ಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಎನ್‌ ಟಿಎ ಹೇಳಿದೆ. ಮೇಘಾಲಯ, ಹರ್ಯಾಣ, ಛತ್ತೀಸ್‌ ಗಢ, ಗುಜರಾತ್‌, ಚಂಡೀಗಢದಲ್ಲಿ ಕಳೆದ ಬಾರಿ ಪರೀಕ್ಷೆ ನಡೆಸಲಾಗಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ, ದೇಶಾದ್ಯಂತ ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 43 ನೇಮಕಾತಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ. ಬಿಜೆಪಿ ಆಡಳಿತದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಯೆಂಬುದು ದೇಶದ ರಾಷ್ಟ್ರೀಯ ಸಮಸ್ಯೆಯಾಗಿ ಬದಲಾಗಿದೆ. ಸರ್ಕಾರವು ಈವರೆಗೆ ಕೋಟ್ಯಂತರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ ಎಂದಿದ್ದಾರೆ.


Share News

Comments are closed.

Exit mobile version