ಬೆಂಗಳೂರು : ವಾಹನ ಸವಾರರಿಗೆ ಬಿಗ್ ರಿಲೀಫ್ ಎನ್ನುವಂತೆ ಇಂದು ಹೈಕೋರ್ಟ್ ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ.
ಇಂದು ಬಿಎನ್ ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಹೈಕೋರ್ಟ್ ಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು, ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ ಅವರನ್ನೊಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು.
ಈ ಅರ್ಜಿಯ ವಿಚಾರಣೆಯ ಬಳಿಕ ಹೈಕೋರ್ಟ್ ನ್ಯಾಯಪೀಠವು, ಮೇ 21ರಂದು ಎಚ್ಎಸ್ಆರ್ಪಿ ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಯಾವುದೇ ದುರುದ್ದೇಶಿತ ಕ್ರಮಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈಗ ರಾಜ್ಯ ಸರ್ಕಾರವು ಆಗಸ್ಟ್-ಸೆಪ್ಟೆಂಬರ್ವರೆಗೆ ಎಚ್ಎಸ್ಆರ್ಪಿ ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ, ಮೇ 21ರ ಆದೇಶದಲ್ಲಿ ಮಾರ್ಪಾಡು ಮಾಡಿ, ಆದೇಶಿಸಿದೆ.
ಇದಕ್ಕೆ ಸೋಂಧಿ ಅವರು ಗಡುವು ವಿಸ್ತರಿಸಿ ಆ ಸಂಬಂಧದ ಅಧಿಸೂಚನೆಯನ್ನು ಪೀಠದ ಮುಂದೆ ಇಡಲು ಸರ್ಕಾರಕ್ಕೆ ಅನುಮತಿಸಬಹುದು. ಆದರೆ, ಅರ್ಜಿದಾರರ ವಿರುದ್ಧ ಯಾವುದೇ ಕ್ರಮಕೈಗೊಳ್ಳಬಾರದು ಎಂದು ಕೋರಿದರು.
ಇದಕ್ಕೆ ಸಮ್ಮತಿಸಿದ ಪೀಠವು ಎಚ್ಎಸ್ಆರ್ಪಿ ಅಳವಡಿಕೆಗೆ ವಿಧಿಸಿದ್ದ ಗಡುವು ವಿಸ್ತರಿಸಲು ಅನುಮತಿಸಿ, ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿತು. ಹೀಗಾಗಿ ರಾಜ್ಯದಲ್ಲಿ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನಿಗದಿ ಪಡಿಸಲಾಗಿದ್ದಂತ ಗಡುವು ಸೆಪ್ಟೆಂಬರ್ ವರೆಗೂ ವಿಸ್ತರಣೆಯಾದಂತೆ ಆಗಿದೆ