Thursday, December 12
Share News

ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ ಬಿಜ್ಜಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಹೂಡಿಯಲ್ಲಿರುವ ಕೆಪಿಟಿಸಿಎಲ್‌ನ ಮಾನವ ಸಂಪನ್ಮೂಲ ಕೇಂದ್ರದಲ್ಲಿ ಶನಿವಾರ ಆಯೋಜಿಸಿದ್ದ ಒಂದು ದಿನದ  ಅವರು ಮಾತನಾಡಿದ ಅವರು, ಪಿಎಮ್ ಸೂರ್ಯ ಘರ್ ಯೋಜನೆಗೆ 5.14 ಲಕ್ಷ ನೋಂದಣಿಯಾಗಿದ್ದು, ಸುಮಾರು 1,17,000 ಅರ್ಜಿಗಳು ಸ್ವೀಕೃತವಾಗಿವೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು, ಎಮ್‌ಎನ್‌ಆರ್ ಇ ಪೋರ್ಟಲ್ ನಲ್ಲಿ 353 ಖಾಸಗಿ ಏಜೆನ್ಸಿಗಳು ನೋಂದಾಯಿಸಿಕೊಂಡಿವೆ ಎಂದು ಬೆಸ್ಕಾಂ ಎಂಡಿ ವಿವರಿಸಿದರು.

ಗ್ರಿಡ್ ಸಂಪರ್ಕಿತ ಮೇಲ್ಛಾವಣಿ ಸ್ಥಾವರಗಳಿಗೆ ಕೇಂದ್ರ ಸರ್ಕಾರವು 30,000 ರೂ. ರಿಂದ 78,000ರೂ. ವರೆಗೆ ಸಹಾಯಧನ ನೀಡುತ್ತದೆ ಮತ್ತು ಈ ಯೋಜನೆ ಅನುಷ್ಠಾನಕ್ಕೆ ಬ್ಯಾಂಕ್ ಗಳಿಂದ ಸಾಲ ಸೌಲಭ್ಯ ಸಹ ಇರುತ್ತದೆ ಎಂದು ಬೆಸ್ಕಾಂ ಎಂಡಿ ತಿಳಿಸಿದರು.

ಬ್ಯಾಂಕ್ ನಿಂದ ಸಾಲ ಪಡೆಯುವವರ ಗಮನಕ್ಕೆ:

ಪ್ರಸ್ತುತ ಬ್ಯಾಂಕ್ ಗಳಿಂದ ಸಾಲ ಸೌಲಭ್ಯವು 65 ವರ್ಷ ವಯೋಮಿತಿಗೆ ಸೀಮಿತವಾಗಿರುತ್ತದೆ. 65 ವರ್ಷ ಮೇಲ್ಪಟ್ಟ ಗ್ರಾಹಕರು, ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸಿದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಜಂಟಿ ಅರ್ಜಿದಾರರನ್ನಾಗಿ ಸೇರಿಸಿ ಸಾಲವನ್ನು ಪಡೆಯಬಹುದು ಎಂದು ಎಸ್‌ ಎಲ್ ಬಿಸಿ ಪ್ರತಿನಿಧಿ ಮಾಹಿತಿ ನೀಡಿದರು. ಹಾಗೆಯೇ ಪಿಎಮ್ ಸೂರ್ಯ ಘರ್ ಯೋಜನೆಯಡಿಯಲ್ಲಿ ಸಾಲ ಪಡೆಯಲು ಬ್ಯಾಂಕ್ ಗಳಿಗೆ ಮೇಲಾಧಾರ ಭದ್ರತೆಯ ಅಗತ್ಯವಿರುವುದಿಲ್ಲ ಎಂದು ಬ್ಯಾಂಕರ್ ಗಳ ಪ್ರತಿನಿಧಿ ಗ್ರಾಹಕರ ಪ್ರಶ್ನೆಗಳಿಗೆ ಉತ್ತರಿಸಿದರು.

ಸೌರ ಛಾವಣಿಯ ಪ್ರಯೋಜನಗಳು:

* ಹೆಚ್ಚುವರಿ ಸ್ಥಳಾವಕಾಶದ ಅಗತ್ಯವಿಲ್ಲ.

* 78,000 ರೂ. ವರೆಗೆ ಸರ್ಕಾರದ ಸಬ್ಸಿಡಿ.

* ವಿದ್ಯುತ್ ಬಿಲ್ ಹೊರೆ ತಪ್ಪುವುದು.

* ಪರಿಸರ ಸ್ನೇಹಿ ನವೀಕರಿಸಬಹುದಾದ ಇಂಧನದ ಬಳಕೆ

* ಕನಿಷ್ಠ ನಿರ್ವಹಣೆ ವೆಚ್ಚ.

* ಇಂಗಾಲದ ಹೊರಸೂಸುವಿಕೆ ತಗ್ಗುವುದು.

ಸಬ್ಸಿಡಿ

* 1ಕಿ.ವ್ಯಾ – 2ಕಿ.ವ್ಯಾ ಸಾಮರ್ಥ್ಯದ ಘಟಕ 30,000- 60,000 .

* 2 2.. – 3 2.. 60,000-78,000 .

* 3 ಕಿ.ವ್ಯಾ. ಗಿಂತ ಹೆಚ್ಚಿನ ಸಾಮರ್ಥ್ಯದ ಘಟಕ ಗರಿಷ್ಠ ಸಬ್ಸಿಡಿ 78,000 .


Share News

Comments are closed.

Exit mobile version