ರಾಜಕೀಯ

ಬಿಜೆಪಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್ ಉಚ್ಚಾಟನೆ

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ಬಿಜೆಪಿ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ.

maithri

ಈ ಇಬ್ಬರು ನಾಯಕರು ಇತ್ತೀಚಿಗೆ ಕಾಂಗ್ರೆಸ್ ನಾಯಕರ ಜೊತೆ ಗುರುತಿಸಿಕೊಂಡಿದ್ದು ಜೊತೆಗೆ ಬಿಜೆಪಿ ಪಕ್ಷದ ವಿರುದ್ಧವೇ ಹೇಳಿಕೆಗಳನ್ನು ನೀಡಿದ್ದರು. ಇದರಿಂದ ಬಿಜೆಪಿ ನಾಯಕರು ಈ ಇಬ್ಬರು ನಾಯಕರನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಆಗ್ರಹಿಸಿದ್ದರು.

ಅದರಂತೆ ಬೆಂಗಳೂರಿನ ಯಶವಂತಪುರದ ಕ್ಷೇತ್ರದ ಶಾಸಕ ಎಸ್‌. ಟಿ ಸೋಮಶೇಖರ್‌ ಮತ್ತು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್‌ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.

ಶಿಸ್ತು ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಎರಡು ತಿಂಗಳ ಹಿಂದೆ ಬಿಜೆಪಿ ಶೋಕಾಸ್‌ ನೋಟಿಸ್‌ ನೀಡಿತ್ತು. ಆದರೆ ಶೋಕಾಸ್‌ ನೋಟಿಸ್‌ಗೆ ಸರಿಯಾದ ಉತ್ತರ ನೀಡದ ಕಾರಣ ಇಬ್ಬರನ್ನೂ ಉಚ್ಚಾಟಿಸಿ ಆದೇಶ ಹೊರಡಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…