pashupathi
ರಾಜಕೀಯ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ: ಸುರ್ಜೇವಾಲ ಹೇಳಿಕೆ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯ ರಾಜಕೀಯದಲ್ಲಿ ಸದ್ದು ಮಾಡ್ತಿರೋ ಸಿಎಂ ಬದಲಾವಣೆ ಬಗ್ಗೆ ಸಿಎಂ, ಡಿಸಿಎಂ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ.

akshaya college

ಸಿಎಂ ಬದಲಾವಣೆ ಬಗ್ಗೆ ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನಂತರ ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಸುರ್ಜೇವಾಲ, ಯಾರೂ ಪಕ್ಷದ ಚೌಕಟ್ಟು ಮೀರಬಾರದು ಅಂತಾ ಸೂಚನೆ ಕೊಟ್ಟಿದ್ದರೂ ಕೆಲವರು ಅದನ್ನು ಮೀರಿ ಮಾತನಾಡಿದ್ದಾರೆ. ಈ ಬಗ್ಗೆ ಗಮನ ಹರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರಿಗೆ ಸೂಚನೆ ನೀಡಿದ್ದೇನೆ ಎಂದು ಸುರ್ಜೇವಾಲ ತಿಳಿಸಿದ್ದಾರೆ.

ಮತಗಳ್ಳತನ ಆರೋಪದ ಬಗ್ಗೆಯೂ ಈ ವೇಳೆ ಸುರ್ಜೇವಾಲ ಮಾತನಾಡಿದ್ದು, ಮತಗಳ್ಳತನ ಮಹದೇವಪುರ ಮತ್ತು ಆಳಂದ ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಬೇರೆ ಬೇರೆ ಕ್ಷೇತ್ರಗಳಲ್ಲೂ ನಡೆದಿದೆ. ಮಹಾರಾಷ್ಟ್ರದಲ್ಲಿ ಮತಗಳ್ಳತನ ಆಗಿರುವ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದಾಖಲೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿ ಸಂವಿಧಾನ ನೀಡಿದ ಹಕ್ಕು ಕಿತ್ತುಕೊಳ್ತಿರುವ ಕಾರಣ ಕಾಂಗ್ರೆಸ್​ ‘ವೋಟ್ ಚೋರಿ’ ಅಭಿಯಾನ ನಡೆಸುತ್ತಿದೆ ಎಂದು ಸುರ್ಜೇವಾಲ ಹೇಳಿದ್ದಾರೆ. ಇನ್ನು ರಾಜ್ಯ ಕಾಂಗ್ರೆಸ್​ ವತಿಯಿಂದಲೂ ಬೆಂಗಳೂರಿನ ಪುಲಕೇಶಿ ನಗರದಲ್ಲಿ ‘ವೋಟ್ ಚೋರಿ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.

ಖರ್ಗೆ ಆರೋಗ್ಯ ವಿಚಾರಿಸಿದ ಸುರ್ಜೇವಾಲ

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಸಲಾಗಿರುವ ಹಿನ್ನಲೆ ಬೆಂಗಳೂರಿನ ಸದಾಶಿವನಗರದಲ್ಲಿರುವ  ಅವರ ನಿವಾಸಕ್ಕೆ ರಣದೀಪ್ ಸುರ್ಜೇವಾಲ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಕಾಂಗ್ರೆಸ್​ ಶಾಸಕ ಎನ್​.ಎ.ಹ್ಯಾರಿಸ್​ ಕೂಡ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವ್ಹೀಲ್ ಚೇರಿನಲ್ಲಿ ವಿಧಾನಸಭೆ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ! ಅಷ್ಟಕ್ಕೂ ಸಿಎಂಗೇನಾಯ್ತು?

ಇಂದಿನಿಂದ ವಿಧಾನಸಭೆ ಅಧಿವೇಶನ. ಈ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವ್ಹೀಟ್‌ ಚೇರಿನಲ್ಲಿ…