ರಾಜಕೀಯ

ಉಡುಪಿಗೆ ಮೋದಿ ಭೇಟಿ: ಗೊಂದಲಗಳಿಗೆ ತೆರೆ ಎಳೆದ ಪ್ರಮೋದ್ ಮಧ್ವರಾಜ್

GL

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಭೇಟಿ ವೇಳೆ ಪ್ರಧಾನಿ ಮೋದಿ ಅವರು ಪ್ರಮೋದ್​​ ಮಧ್ವರಾಜ್​ ಕೊಡುಗೆ ನೀಡಿದ್ದ ಕನಕನ ಕಿಂಡಿಯ ಸ್ವರ್ಣ ಕವಚವನ್ನು ಉದ್ಘಾಟಿಸಿದ್ದರು. ಆದರೆ ಕಾರ್ಯಕ್ರಮಕ್ಕೆ ಮಾಜಿ ಸಚಿವರಿಗೆ ಆಹ್ವಾನ ಇರಲಿಲ್ಲ. ಇದೇ ವಿಚಾರವೀಗ ರಾಜಕೀಯವಾಗಿ ಒಂದಿಷ್ಟು ಚರ್ಚೆಗಳಿಗೆ ಕಾರಣವಾಗಿದೆ. ಕೊಡುಗೆ ನೀಡಿದ್ದು ಬಿಜೆಪಿ ಮುಖಂಡರೇ ಆದರೂ ಅವರನ್ನು ಸೈಡ್​​ಲೈನ್​ ಮಾಡಲಾಯ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆ ಆರಂಭವಾಗಿರು ಕಾರಣ ಪ್ರಮೋದ್​​ ಮಧ್ವರಾಜ್​​ ಅವರೇ ಎಲ್ಲದಕ್ಕೂ ಉತ್ತರ ಕೊಟ್ಟಿದ್ದಾರೆ.

core technologies

ಜಿಲ್ಲಾ ಬಿಜೆಪಿ ನಾಯಕರು ಪ್ರಮೋದ್​​ ಮಧ್ವರಾಜ್​​ ಅವರ ಜೊತೆಯಾಗಿ ಇಂದು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಎಲ್ಲ ಊಹಾಪೋಹಗಳಿಗೂ ಮಾಜಿ ಸಚಿವರು ಉತ್ತರಿಸಿದ್ದಾರೆ.ತಮ್ಮ ಹಿಂದಿನ ಹೇಳಿಕೆಗಳಲ್ಲಿ ಅಸಮಾಧಾನದ ಭಾವನೆ ಇರಲಿಲ್ಲ. ನನ್ನ ಸೇವೆಯನ್ನು ಪ್ರಧಾನಿ ಉದ್ಘಾಟಿಸಿರುವುದು ನನಗೆ ಅಪಾರ ಸಂತೋಷ ಎಂದು ಅವರು ಪುನರುಚ್ಛರಿಸಿದ್ದಾರೆ. ಮಠದವರಾಗಲಿ, ಜಿಲ್ಲಾ ಬಿಜೆಪಿ ನಾಯಕರಾಗಲಿ ಯಾರೂ ಕೂಡ ನನ್ನ ಕಡೆಗಣಿಸಿದ್ದಾರೆ ಎನಿಸುತ್ತಿಲ್ಲ. ಅದನ್ನು ಹುಡುಕುವ ಪ್ರಯತ್ನವನ್ನೂ ನಾನು ಮಾಡಿಲ್ಲ ಎಂದಿದ್ದಾರೆ. ಕನಕನ ಕಿಂಡಿಗೆ ಸ್ವರ್ಣ ಕವಚ ದಾನ ಮಾಡಿದ ವ್ಯಕ್ತಿಯಾಗಿ ಪ್ರಧಾನಿಯ ಉದ್ಘಾಟನಾ ಕ್ಷಣವನ್ನು ಸ್ಥಳದಲ್ಲೇ ನಿಂತು ವೀಕ್ಷಿಸುವ ಆಸೆ ಇದ್ದರೂ ಅದು ಸಾಧ್ಯವಾಗಿಲ್ಲ. ಈ ಬಗ್ಗೆ ನನ್ನ ಪರ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡವರಿಗೆ ಧನ್ಯವಾದ ತಿಳಿಸೋದಾಗಿಯೂ ಅವರು ಹೇಳಿದ್ದಾರೆ.

ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಂಬಂಧ ನಾಲ್ಕು ಬಾರಿ ನನ್ನ ಆಧಾರ್ ಕಾರ್ಡ್ ಪ್ರತಿ, ಫೋಟೋವನ್ನು ಪಡೆದುಕೊಳ್ಳಲಾಗಿತ್ತು. ಆದರೆ ಪಿಎಂ ಕಚೇರಿಯಿಂದ ಬಂದ ಪಟ್ಟಿಯಲ್ಲಿ ನನ್ನ ಹೆಸರು ಇಲ್ಲದ ವಿಚಾರ ನ.27ರ ರಾತ್ರಿ ಎಸ್ಪಿ ಮೂಲಕ ತಿಳಿದುಬಂತು. ಆ ಬಗ್ಗೆ ನನಗೆ ದುಃಖ, ಬೇಸರ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನು ಯಾರು ತಪ್ಪಿಸಿದ್ದಾರೆಂದು ನನಗೆ ಗೊತ್ತಿಲ್ಲ. ಇಂತಹವರು ತಪ್ಪಿಸಿದ್ದಾರೆ ಎಂಬುದಾಗಿ ಊಹೆ ಮಾಡಲು ಕೂಡ ನಾನು ಬಯಸುವುದಿಲ್ಲ. ನಾನು ಅಲ್ಲಿಗೆ ಹೋಗದಂತೆ ಯಾರು ತಡೆದಿದ್ದಾರೆಂಬುದು ಕೂಡ ನನಗೆ ಗೊತ್ತಿಲ್ಲ. ಹಾಗಾಗಿ ಯಾರ ಮೇಲೆಯೂ ಗೂಬೆ ಕೂರಿಸುವ ವ್ಯರ್ಥ ಪ್ರಯತ್ನ ಮಾಡುವುದಿಲ್ಲ. ಯಾರಾದರೂ ತಪ್ಪಿಸಿದ್ದರೆ ಅದು ಅವರ ರಾಜಕೀಯ ತಪ್ಪು ಹೆಜ್ಜೆ ಎಂದು ನಾನು ಭಾವಿಸುತ್ತೇನೆ ಎಂದರು.

ಇನ್ನು ಈ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕೂಡ ಸ್ಪಷ್ಟನೆ ನೀಡಿದ್ದಾರೆ. ಮಠ ಮತ್ತು ನಮ್ಮಿಂದ ಕಳುಹಿಸಿದ ಅತಿಥಿಗಳ ಪಟ್ಟಿಯಲ್ಲಿ ಪ್ರಮೋದ್ ಮಧ್ವರಾಜ್ ಅವರ ಹೆಸರು  ಸೇರಿಸಲಾಗಿತ್ತು. ಆದರೆ ಪ್ರಧಾನಿಯ ಕಚೇರಿಯಿಂದ ಪರಿಷ್ಕೃತ ಪಟ್ಟಿಯನ್ನು ಕಳುಹಿಸಿದಾಗ ಅವರು ಸೇರಿದಂತೆ ಹಲವು ಹೆಸರುಗಳು ಇರಲಿಲ್ಲ. ಇದರಲ್ಲಿ ಜಿಲ್ಲಾ ಬಿಜೆಪಿ ಯಾವುದೇ ರೀತಿಯಲ್ಲೂ ಪಾತ್ರವಹಿಸಿಲ್ಲ. ಪ್ರಮೋದ್​​ ಮಧ್ವರಾಜ್ ಅವರೇ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಹಾಲು–ಸಕ್ಕರೆ ಬೆರೆತಂತೆ ಬಿಜೆಪಿ ಮತ್ತು ಪ್ರಮೋದ್ ಮಧ್ವರಾಜ್ ಒಟ್ಟಿಗಿದ್ದೇವೆ ಎಂದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts