tamanvi
ರಾಜಕೀಯ

ಫೆ. 16ರಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪದಗ್ರಹಣ | ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪ್ರಚಾರ ಸಮಿತಿಯ ಕಾರ್ಯವೈಖರಿ ಬಗ್ಗೆ ವಿವರಿಸಿದ ಮಹಮ್ಮದಾಲಿ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಾಂಗ್ರೆಸ್ ಪಕ್ಷ ಪ್ರಚಾರ ಸಮಿತಿಗೆ ಇದೀಗ ಹೆಚ್ಚು ಒತ್ತು ನೀಡುತ್ತಿದ್ದು, ಜಿಲ್ಲಾ ಪ್ರಚಾರ ಸಮಿತಿಯ ಪದಾಧಿಕಾರಿಗಳ ಪದಸ್ವೀಕಾರ ಹಾಗೂ ಕಾರ್ಯಕರ್ತರ ಸಮಾವೇಶ ಪುತ್ತೂರಿನ ಜೈನ ಸಮುದಾಯ ಭವನದಲ್ಲಿ ಫೆ. 16ರಂದು ಬೆಳಿಗ್ಗೆ 10 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮಹಮ್ಮದಾಲಿ ಹೇಳಿದರು.

Shani-pooja

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ಚುನಾವಣಾ ಪ್ರಚಾರ ಸಮಿತಿ ಎಂದು ಇತ್ತು. ಇದೀಗ ವರ್ಷದ ಎಲ್ಲಾ ದಿನಗಳಲ್ಲೂ ಪ್ರಚಾರ ನಡೆಸುವ ಉದ್ದೇಶದಿಂದ ಪ್ರಚಾರ ಸಮಿತಿಯನ್ನು ರಚಿಸಲಾಗಿದೆ. ಮಂಗಳೂರು ಹಾಗೂ ಮೂಲ್ಕಿಯನ್ನು ಒಂದು ಭಾಗವಾಗಿ ಮಾಡಿದ್ದು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿಯನ್ನು ಗ್ರಾಮಾಂತರ ಜಿಲ್ಲೆಯನ್ನಾಗಿ ಮಾಡಿ ತನ್ನನ ಅಧ್ಯಕ್ಷನನ್ನಾಗಿ ಮಾಡಿದ್ದಾರೆ ಎಂದರು.

ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಈ ನೇಮಕವನ್ನು ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಈ 4 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದ ಪರ ವ್ಯವಸ್ಥಿತವಾಗಿ ಪ್ರಚಾರ ಮಾಡುವ ಕಾರ್ಯವನ್ನು ಸಮಿತಿ ಮಾಡಲಿದೆ. ಇದು ಚುನಾವಣೆಯ ಕಾಲದಲ್ಲಿ ಮಾತ್ರ ಇರುವ ಸಮಿತಿಯಲ್ಲ. ನಿರಂತರ ಅಸ್ತಿತ್ವದಲ್ಲಿರುವ ಸಮಿತಿ. ಸರಕಾರದ ಕಾರ್ಯಕ್ರಮಗಳು, ಪಕ್ಷದ ಕಾರ್ಯಕ್ರಮ ಮತ್ತು ಪಕ್ಷದ ಸಿದ್ಧಾಂತದ ಬಗ್ಗೆ ನಿತ್ಯ ನಾನಾ ರೂಪಗಳಲ್ಲಿ ಪ್ರಚಾರ ಮಾಡುವ ಕಾರ್ಯ ನಾವು ಮಾಡಲಿದ್ದೇವೆ ಎಂದರು.

ಪದಗ್ರಹಣ ಸಮಾರಂಭ:

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಅಶೋಕ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಮುನೀರ್ ಜನ್ಸಾಲೆ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಮುಖ್ಯ ಸಂಯೋಜಕ ಸುಧೀರ್ ಕುಮಾರ್ ಮರೋಳಿ ಮುಖ್ಯ ಭಾಷಣ ಮಾಡಲಿದ್ದಾರೆ. ಪುತ್ತೂರು ಬ್ಲಾಕ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ಮಾಜಿ ಸಚಿವ ಬಿ. ರಮಾನಾಥ ರೈ, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಶಾಸಕ ಜೆ.ಆರ್. ಲೋಬೋ, ಮುಖಂಡರಾದ ಪದ್ಮರಾಜ್ ಆರ್. ಪೂಜಾರಿ, ಎಂ.ಎಸ್. ಮಹಮ್ಮದ್, ರಕ್ಷಿತ್ ಶಿವರಾಂ, ಭರತ್ ಮುಂಡೋಡಿ, ಕೃಷ್ಣಪ್ಪö, ಕೃಪಾ ಆಳ್ವö, ಶಾಹುಲ್ ಹಮೀದ್, ಉಷಾ ಅಂಚನ್, ಜೋನಿ ಕಲ್ಲುಗುಂಡಿ, ಜೋಕಿಂ ಡಿಸೋಜ ಮುಂತಾದ ನಾಯಕರು ಭಾಗವಹಿಸಲಿದ್ದಾರೆ ಎಂದರು.

ಪ್ರಚಾರ ಸಮಿತಿಗೆ ಈಗಾಗಲೇ ವಿಧಾನಸಭಾ ಕ್ಷೇತ್ರವಾರು ಸಮಿತಿ, ಬ್ಲಾಕ್‌ ವಾರು ಸಮಿತಿಗಳನ್ನು ರಚಿಸಲಾಗಿದೆ. ಈ ಎಲ್ಲ ಸಮಿತಿಗಳು ನಿರಂತರವಾಗಿ ಗ್ರಾಮ, ತಾಲೂಕು ಮಟ್ಟಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಿದೆ ಎಂದವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ  ಪ್ರಚಾರ ಸಮಿತಿಯ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಡಾ.ಕೆ.ಬಿ.ರಾಜಾರಾಂ, ಬ್ಲಾಕ್ ಸಮಿತಿ ಅಧ್ಯಕ್ಷ ಅಮರನಾಥ ಗೌಡ, ಕಡಬ ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ  ಯತೀಶ್ ಕುಮಾರ್ ಬಾನಡ್ಕ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts