ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಉಪ್ಪಿನಂಗಡಿಯ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ನಿವೃತ್ತ ಶಿಕ್ಷಕಿ ದುರ್ಗಾಮಣಿ ಮಾತನಾಡಿ, ಮಹಿಳಾ ಜೀವನ ಪದ್ಧತಿ ಹಾಗೂ ರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.
ಪರಿಸರ ಸಂರಕ್ಷಣೆ ವಿಷಯದಲ್ಲಿ ರಾಜ್ಯ ಮಟ್ಟದಲ್ಲಿ ಭಾಷಣ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದ ನಿವೇದಿತಾ ಅವರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ಯಶೋಧ ಕೆ ಗೌಡ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಉಷಾ ಮುಳಿಯ, ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಸುಜಾತ ಕೃಷ್ಣ, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸದಸ್ಯೆ ಶೋಭಾ, ವೀಣಾ, ಲತಾ, ಹಾಗೂ ಖುಷಿತ ಉಪಸ್ಥಿತರಿದ್ದರು.
























