ರಾಜಕೀಯ

ಮಹಿಳಾ ಮೀಸಲಾತಿ ವಿರೋಧಿಸುವ ಕಾಂಗ್ರೆಸ್ ನಡೆಗೆ ಬಿಜೆಪಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಹಿಳಾ ಮೀಸಲಾತಿ ಕಾಯ್ದೆಯನ್ನು‌ ವಿರೋಧಿಸುವ ಕಾಂಗ್ರೆಸ್ ನಡೆಯನ್ನು ಪ್ರತಿಭಟಿಸಿ ಬಿಜೆಪಿಯ ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲದ ವತಿಯಿಂದ ಸೋಮವಾರ ಅಮರ್ ಜವಾನ್ ಸ್ಮಾರಕ ಬಳಿ ಜನಾಕ್ರೋಶ ಮಹಿಳಾ ಸಭೆ ನಡೆಯಿತು.

maithri

ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಮಾತನಾಡಿ, ಮಹಿಳಾ ಮೀಸಲಾತಿಯನ್ನು ಜಾರಿಗೆ ತರಲು ಹೊರಟಿರುವ ನರೇಂದ್ರ ಮೋದಿ ನೇತೃತ್ವದ ಸರಕಾರದ ಐತಿಹಾಸಿಕ ಕಾಯ್ದೆಯನ್ನು ವಿರೋಧಿಸಿ ತಡೆ ನೀಡುತ್ತಿರುವ ಕಾಂಗ್ರೆಸ್ ನಡೆ ಸರಿಯಲ್ಲ. ಮಹಿಳೆಯರಿಗೆ ಸಿಗಬೇಕಾದ ಸಂವಿಧಾನಾತ್ಮಕ ಹಕ್ಕಿನಿಂದ ವಂಚನೆ ಮಾಡುತ್ತಿದೆ ಎಂದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾಗೌರಿ ಮಾತನಾಡಿ, ಕಾಂಗ್ರೆಸ್ ನಡೆಯನ್ನು ಖಂಡಿಸಿದರು.

ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ್ ಉಜಿರೆಮಾರು, ಆರ್.ಸಿ. ನಾರಾಯಣ್, ಸಾಜಾ ರಾಧಾಕೃಷ್ಣ ಆಳ್ವ, ಯತೀಂದ್ರ ಕೊಚ್ಚಿ, ರಾಜೇಶ್ ಬನ್ನೂರು, ನಿತೀಶ್ ಶಾಂತಿವನ, ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ನಿಕಟಪೂರ್ವ ಸದಸ್ಯೆ ಇಂದಿರಾ ಪುರುಷೋತ್ತಮ್ ಆಚಾರ್ಯ, ಆರ್ಯಾಪು ಗ್ರಾಪಂ ನಿಕಟಪೂರ್ವ ಅಧ್ಯಕ್ಷೆ ಗೀತಾ, ನಿಕಟಪೂರ್ವ ಸದಸ್ಯ ಯತೀಶ್ ದೇವ, ಜಯಂತ್ ಶೆಟ್ಟಿ ಕಂಬಳತ್ತಡ್ಡ, ಸ್ವರ್ಣಲತಾ ಹೆಗ್ಡೆ, ದೀಕ್ಷಾ ಪೈ, ದಿವ್ಯಾ ಪುರುಷೋತ್ತಮ್ ಮುಂಗ್ಲಿಮನೆ, ಗೌರಿ ಬನ್ನೂರು ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…