tamanvi
ರಾಜಕೀಯ

ಬಂಗಾಳ ಚುನಾವಣಾ ಫಲಿತಾಂಶ: ಚುರುಮುರಿ ತಯಾರಿಸಿ ಸಂಭ್ರಮಿಸಿದ ಮಂಗಳೂರು ಬಿಜೆಪಿ

ಈ ಸುದ್ದಿಯನ್ನು ಶೇರ್ ಮಾಡಿ

ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ…

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ಘಟಕದ ವತಿಯಿಂದ ಸಂಭ್ರಮಾಚರಣೆ ನಡೆಯಿತು.

ಬಂಗಾಳದಲ್ಲಿ ಬಿಜೆಪಿ 195 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಟಿಎಂಸಿ 91 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಚುರುಮುರಿ ತಿಂದ ಮೋದಿ, ಗುಂಡಿಗೆ ಬಿದ್ದ ದೀದಿ ಎಂಬ ಘೋಷಣೆಯನ್ನು ಕೂಗುತ್ತಾ ಮಂಗಳೂರಿನ ಪಿವಿಎಸ್ ಬಳಿ ಇರುವ ಬಿಜೆಪಿ ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು, ನಾಯಕರು ಪಟಾಕಿ ಸಿಡಿಸಿ, ಲಡ್ಡು ಹಂಚಿ ವಿಜಯೋತ್ಸವ ಆಚರಿಸಿದರು.

ಶಾಸಕ ವೇದವ್ಯಾಸ ಕಾಮತ್ ಅವರು ಚುರುಮುರಿ ತಯಾರಿಸಿ ಕಾರ್ಯಕರ್ತರಿಗೆ ಮತ್ತು ಸಾರ್ವಜನಿಕರಿಗೆ ಹಂಚಿದರು. ಬಂಗಾಳದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಚುರುಮುರಿ ಸವಿದಿದ್ದನ್ನು ಸ್ಮರಿಸುತ್ತಾ, ಘೋಷಣೆಗಳನ್ನು ಕೂಗಿದರು.

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ಜಿ್ಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…

ದಿಢೀರ್ ಕೋರ್ ಕಮಿಟಿ ಸಭೆ ಕರೆದ ಬಿಜೆಪಿ | ಕರ್ನಾಟಕ ಉಳಿಸಿ, ಕಾಂಗ್ರೆಸ್ ತೊಲಗಿಸಿ ಹೋರಾಟಕ್ಕೆ ನಿರ್ಧಾರ!

ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳ ಹಿನ್ನೆಲೆಯಲ್ಲಿ ದಿಢೀರ್…