ರಾಜಕೀಯ

ರಾಜ್ಯಪಾಲರ ಭೇಟಿಗೆ ಸಮಯ ಕೋರಿದ ಸಿದ್ದರಾಮಯ್ಯ; ಸಿಎಂ ಹುದ್ದೆಯಿಂದ ಕೆಳಗಿಳಿಯುವ ಸಾಧ್ಯತೆ?

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿ ನಾಯಕತ್ವ ಬದಲಾವಣೆಯಾಗಬಹುದು ಎಂಬ ತೀವ್ರ ಊಹಾಪೋಹಗಳ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

maithri

ಮುಖ್ಯಮಂತ್ರಿ ಕಚೇರಿ ಮೂಲಗಳು ಬುಧವಾರ ಈ ಮಾಹಿತಿ ನೀಡಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೆ ಎಂಬ ಚರ್ಚೆಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿದೆ.

‘ಹೌದು, ಸಿದ್ದರಾಮಯ್ಯ ಅವರು ನಾಳೆ ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ’ ಎಂದು ಮುಖ್ಯಮಂತ್ರಿಯ ಆಪ್ತ ಮೂಲಗಳು ಪಿಟಿಐಗೆ ತಿಳಿಸಿವೆ.

ಕಾಂಗ್ರೆಸ್ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಯನ್ನೂ ತಳ್ಳಿಹಾಕಲಾಗುವುದಿಲ್ಲ ಎಂದು ತಿಳಿದು ಬಂದಿದೆ.

ಇದರ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೊಂದಿಗೆ ಹಲವು ಸುತ್ತಿನ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯ ಬಳಿಕ ರಾಜ್ಯದ ನಾಯಕತ್ವದ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts