tamanvi
ರಾಜಕೀಯ

ಮಧ್ಯಾಹ್ನ 3 ಗಂಟೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ: ಸಿದ್ದರಾಮಯ್ಯ ಘೋಷಣೆ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಅವರೇ ಸ್ವತಃ ಪ್ರಕಟಿಸಿದ್ದಾರೆ.

maithri

ಇಂದು ನಡೆದ ಸಚಿವರ ಮಹತ್ವದ ‘ಬ್ರೇಕ್ಫಾಸ್ಟ್ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ ಮಾಡಲಿರುವ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಒಂದು ವೇಳೆ ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಅತ್ಯಂತ ಸೌಹಾರ್ದಯುತವಾಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪರಸ್ಪರ ಆಲಿಂಗಿಸಿಕೊಂಡಿದ್ದಾರೆ.

ಮುಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…