tamanvi
ರಾಜಕೀಯ

ತಮಿಳುನಾಡು ಸಿಎಂ ವಿಜಯ್ ಪತ್ನಿ ಬಿಜೆಪಿಗೆ?

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಚೆನ್ನೈ: ನಟ – ಮುಖ್ಯಮಂತ್ರಿ ವಿಜಯ್‌ ಅವರ ಮಾಜಿ ಪತ್ನಿ ರಾಜಕೀಯಕ್ಕೆ ಬರಲಿದ್ದಾರೆ ಎನ್ನುವ ಸುದ್ದಿಯೊಂದು ಈಗ ಭಾರೀ ವೈರಲ್‌ ಆಗುತ್ತಿದೆ.

maithri

ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಅವರ ಮಾಜಿ ಪತ್ನಿ

ಸಂಗೀತ ಸ್ವರ್ಣಲಿಂಗಂ ಅವರು ಸದ್ಯವೇ ಬಿಜೆಪಿ ಸೇರಲಿದ್ದಾರೆ ಎಂಬ ಗಾಸಿಪ್ ತಮಿಳುನಾಡು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ.

‘ಗ್ರೇಟ್ ಆಂಧ್ರ’ ವೆಬ್‌ಸೈಟ್‌ ಈ ವರದಿಯನ್ನು ಪ್ರಕಟಿಸಿದೆ. ಕಳೆದ ಕೆಲವು ವರ್ಷಗಳಿಂದ ನಟ ವಿಜಯ್ ಹಾಗೂ ಸಂಗೀತ ನಡುವೆ ಭಿನ್ನಾಭಿಪ್ರಾಯಗಳು ತಲೆದೂರಿವೆ ಮತ್ತು ಇಬ್ಬರೂ ದೂರವಾಗಿದ್ದಾರೆ ಎಂಬ ಸುದ್ದಿಗಳು ಮಾಧ್ಯಮಗಳಲ್ಲಿ ಸಖತ್ ಸೌಂಡ್ ಮಾಡುತ್ತಿದ್ದವು.

ವಿಜಯ್ ಅವರ ರಾಜಕೀಯ ಪ್ರವೇಶ ಮತ್ತು ಇತ್ತೀಚಿನ ಪ್ರಮುಖ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಂಗೀತ ಹಾಗೂ ಅವರ ಮಕ್ಕಳು ಕಾಣಿಸಿಕೊಳ್ಳದೇ ಇರುವುದು ಈ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿತ್ತು. ಇದೀಗ ಅವರ ರಾಜಕೀಯ ಎಂಟ್ರಿ ಸುದ್ದಿ ಮತ್ತೊಮ್ಮೆ ಅವರ ಹೆಸರನ್ನು ಮುನ್ನೆಲೆಗೆ ತಂದಿದೆ.

ಸದ್ಯಕ್ಕೆ ಸಂಗೀತ ಅವರ ಬಿಜೆಪಿ ಸೇರ್ಪಡೆ ಕುರಿತು ಅವರ ಕಡೆಯಿಂದಾಗಲಿ ಅಥವಾ ಬಿಜೆಪಿ ಪಕ್ಷದಿಂದಾಗಲಿ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಮನವೊಲಿಕೆ ಯತ್ನ?

ವರದಿಗಳ ಪ್ರಕಾರ, ತಮಿಳುನಾಡಿನಲ್ಲಿ ವಿಜಯ್ ಅವರ ರಾಜಕೀಯ ಬೆಳವಣಿಗೆಗೆ ಬ್ರೇಕ್ ಹಾಕಲು ಬಿಜೆಪಿ ಈ ತಂತ್ರ ರೂಪಿಸಿದೆ ಎನ್ನಲಾಗುತ್ತಿದೆ. ಬಿಜೆಪಿಯ ಹಿರಿಯ ನಾಯಕಿಯಾಗಿರುವ ದಕ್ಷಿಣ ಭಾರತದ ಖ್ಯಾತ ನಟಿಯೊಬ್ಬರು, ಸಂಗೀತ ಅವರನ್ನು ಪಕ್ಷಕ್ಕೆ ಕರೆತರಲು ಸಂಧಾನ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ಅಣ್ಣಾಮಲೈ!! ‘ಭಯವಿಲ್ಲದ ಮನಸ್ಸಿಗೆ ಮಿತಿಗಳಿಲ್ಲ’ ಹೊಸ ಸುಳಿವು ನೀಡಿದ ಪೋಸ್ಟರ್ ಸಾಲು!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ…